ಜಮ್ಮು: ಗಸ್ತು ಪಡೆ ಮೇಲೆ ಪಾಕಿಸ್ತಾನ ಸೇನೆ ದಾಳಿ, ಬಿಎಸ್ಎಫ್ ಯೋಧ ಹುತಾತ್ಮ
ಇಲ್ಲಿನ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಭಾಗದಲ್ಲಿ ಗಸ್ತುಪಡೆ ...
ಜಮ್ಮು: ಇಲ್ಲಿನ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಭಾಗದಲ್ಲಿ ಗಸ್ತುಪಡೆ ಮೇಲೆ ಪಾಕಿಸ್ತಾನ ರೇಂಜರ್ಸ್ ದಾಳಿ ನಡೆಸಿದ್ದರಿಂದ ಗಡಿ ಭದ್ರತಾ ಪಡೆಯ(ಬಿಎಸ್ಎಫ್) ಜವಾನರೊಬ್ಬರು ಹುತಾತ್ಮರಾಗಿದ್ದಾರೆ.
ಪಾಕಿಸ್ತಾನಿ ರೇಂಜರ್ಸ್ ದಾಳಿಗೆ ಗಡಿ ಭದ್ರತಾ ಪಡೆ ತಕ್ಕ ಪ್ರತ್ಯುತ್ತರ ನೀಡಿದೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಸಾಂಬಾ ವಲಯದಲ್ಲಿ ಗಡಿ ಭದ್ರತಾ ಪಡೆ ಮೇಲೆ ಪಾಕಿಸ್ತಾನಿ ರೇಂಜರ್ಸ್ ಏಕಾಏಕಿ ದಾಳಿ ನಡೆಸಲು ಆರಂಭಿಸಿದರು. ದಾಳಿಯಲ್ಲಿ ಬಿಎಸ್ಎಫ್ ಕಾನ್ಸ್ಟೇಬಲ್ ತಪನ್ ಮೊಂಡಲ್ ಗಾಯಗೊಂಡಿದ್ದಾರೆ.
ಕಳೆದ ತಿಂಗಳು 31ರಂದು ಪಾಕಿಸ್ತಾನ ಪಡೆ ಕದನ ವಿರಾಮ ಉಲ್ಲಂಘಿಸಿ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಕರ್ಮರ ಬೆಲ್ಟ್ ನಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಭಾರತೀಯ ಪಡೆ ಮೇಲೆ ದಾಳಿ ನಡೆಸಿತ್ತು.
ಕಳೆದ 26ರಂದು ಪಾಕಿಸ್ತಾನ ಪಡೆ ಸಣ್ಣ ಮತ್ತು ಭಾರೀ ಶಸ್ತಾಸ್ತ್ರಗಳಿಂದ ಕೆರ್ನಿ ವಲಯದ ಶೆರ್ ಶಕ್ತಿ ಮತ್ತು ಮಂದರ್ ಪ್ರದೇಶದಲ್ಲಿ ಗಡಿ ಭದ್ರತಾ ಪಡೆ ಮೇಲೆ ದಾಳಿ ನಡೆಸಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.