ಅಹಮದಾಬಾದ್(ಗುಜರಾತ್): ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಸೇರಿದಂತೆ ಯಾವುದೇ ರಾಜಕೀಯ ಪಕ್ಷವನ್ನು ಸೇರುವುದಿಲ್ಲ ಎಂದು ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ನಾಯಕ ಜಿಗ್ನೇಶ್ ಮೇವಾನಿ ಹೇಳಿದ್ದಾರೆ.
ದಲಿತ ಗುಂಪುಗಳ ಬೇಡಿಕೆಗಳ ಕುರಿತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಇತರ ಯಾವುದೇ ರಾಜಕೀಯ ಪಕ್ಷಗಳು ಚರ್ಚಿಸಲು ನಿರ್ಧರಿಸಿದರೆ ಅವರ ಜತೆ ಮಾತುಕತೆ ನಡೆಸುವುದಾಗಿ ಜಿಗ್ನೇಶ್ ಮೇವಾನಿ ಹೇಳಿದ್ದಾರೆ.
ಇನ್ನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಪಡೆಯಲು ಅಪೇಕ್ಷಿಸುವುದಿಲ್ಲ ಎಂದರು. ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಜಿಗ್ನೇಶ್ ಕಳೆದ 22 ವರ್ಷಗಳ ಬಿಜೆಪಿ ಅಧಿಕಾರವಧಿಯಲ್ಲಿ ದಲಿತರನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.
ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷಕ್ಕೆ ಜಿಗ್ನೇಶ್ ಮೇವಾನಿ ಬೆಂಬಲ ನೀಡುತ್ತಾರೆ ಎಂದು ಹೇಳಲಾಗುತ್ತಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಜಿಗ್ನೇಶ್ ತಾವು ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics