ಬಿಜೆಪಿ ಸೇರಿದ ಟಿಎಂಸಿ ಮಾಜಿ ನಾಯಕ ಮುಕುಲ್ ರಾಯ್
ಇತ್ತೀಚೆಗಷ್ಟೇ ತೃಣಮೂಲ ಕಾಂಗ್ರೆಸ್ ತೊರೆದಿದ್ದ ಮಾಜಿ ಕೇಂದ್ರ ಸಚಿವ ಮುಕುಲ್ ರಾಯ್ ನ.03 ರಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ನವದೆಹಲಿ: ಇತ್ತೀಚೆಗಷ್ಟೇ ತೃಣಮೂಲ ಕಾಂಗ್ರೆಸ್ ತೊರೆದಿದ್ದ ಮಾಜಿ ಕೇಂದ್ರ ಸಚಿವ ಮುಕುಲ್ ರಾಯ್ ನ.03 ರಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ಸೇರ್ಪಡೆಗೊಂಡ ಬಳಿಕ ಮಾತನಾಡಿರುವ ಮುಕುಲ್ ರಾಯ್, "ಒಂದು ರಾಜಕೀಯ ಪಕ್ಷ ನಿರ್ದಿಷ್ಟ ತತ್ವಗಳನ್ನು ಹೊಂದಿರಬೇಕಾಗುತ್ತದೆ, ಕೆಲವೊಮ್ಮೆ ತೃಣಮೂಲ ಕಾಂಗ್ರೆಸ್ ಬಿಜೆಪಿಯೊಂದಿಗೆ ಇರುತ್ತದೆ, ಮತ್ತೆ ಕೆಲವೊಮ್ಮೆ ಕಾಂಗ್ರೆಸ್ ನೊಂದಿಗೆ ಇರುತ್ತದೆ. ತೃಣಮೂಲ ಕಾಂಗ್ರೆಸ್ ಎನ್ ಡಿಎ ಸರ್ಕಾರದೊಂದಿಗೆ ಗುರುತಿಸಿಕೊಂಡು ಬಿಜೆಪಿಯೊಂದಿಗೆ ಕೈ ಜೋಡಿಸಿತ್ತು. ಆದರೆ ಈಗ ಕಾಂಗ್ರೆಸ್ ಇಲ್ಲದೇ ದೇಶ ಮುನ್ನಡೆಯುವುದೇ ಇಲ್ಲ ಎಂದು ಭಾವಿಸುತ್ತಿದೆ. ಈ ಸಂಗತಿಗಳೇ ನನ್ನನ್ನು ಪಕ್ಷ ತೊರೆಯುವಂತೆ ಮಾಡಿತ್ತು" ಎಂದು ಹೇಳಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ 6 ವರ್ಷಗಳ ಕಾಲ ಮುಕುಲ್ ರಾಯ್ ಅವರನ್ನು ಪಕ್ಷದಿಂದ ಉಚ್ಚಾಟಿಸಿತ್ತು. ಅಷ್ಟೇ ಅಲ್ಲದೇ ಶಾರದಾ ಹಗರಣದಲ್ಲಿ ಮುಕುಲ್ ರಾಯ್ ಶಾಮೀಲಾಗಿದ್ದಾರೆ ಎಂದು ಆರೋಪಿಸಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಕುಲ್ ರಾಯ್, ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೆಲಸ ಮಾಡುವುದು ಹೆಮ್ಮೆಯ ವಿಷಯ ಎಂದೂ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.