ಆಧಾರ್ ಕಾರ್ಡ್ 
ದೇಶ

ಆಧಾರ್‍ ಜೋಡಣೆಯಿಂದ 5 ಕೋಟಿ ನಕಲಿ ಖಾತೆ ಪತ್ತೆ: ಪಿಯೂಶ್ ಗೋಯಲ್

ಆಧಾರ್ ಸಂಖ್ಯೆ ಜೋಡಣೆಯಿಂದ 5 ಕೋಟಿ ನಕಲಿ ಖಾತೆಗಳು ಪತ್ತೆಯಾಗಿವೆ ಎಂದು ಕೇಂದ್ರ ರೈಲ್ವೆ ಮತ್ತು ಕಲ್ಲಿದ್ದಲು ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ...

ನವದೆಹಲಿ: ಆಧಾರ್ ಸಂಖ್ಯೆ ಜೋಡಣೆಯಿಂದ 5 ಕೋಟಿ ನಕಲಿ ಖಾತೆಗಳು ಪತ್ತೆಯಾಗಿವೆ ಎಂದು ಕೇಂದ್ರ ರೈಲ್ವೆ ಮತ್ತು ಕಲ್ಲಿದ್ದಲು ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ. 
ಆಧಾರ್ ಸಂಖ್ಯೆ ಕಡ್ಡಾಯ ಕ್ರಮದಿಂದ 3.5 ಕೋಟಿ ಅಕ್ರಮ ಗ್ಯಾಸ್ ಮತ್ತು 1.6 ಕೋಟಿ ರೇಷನ್ ಕಾರ್ಡ್ ಗಳು ಪತ್ತೆಯಾಗಿವೆ. ಕೇಂದ್ರ ಸರ್ಕಾರದ ಈ ಯೋಜನೆ ಭ್ರಷ್ಟಾಚಾರ ತೊಡೆದು ಹಾಕಲು ಸಾಧ್ಯವಾಗುತ್ತಿದೆ ಎಂದರು. 
ಕೇಂದ್ರ ಸರ್ಕಾರ ಪ್ರತಿಯೊಂದಕ್ಕೂ ಆಧಾರ್ ಸಂಖ್ಯೆ ಕಡ್ಡಾಯಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಇದನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸುಪ್ರೀಂಕೋರ್ಟ್ ನಲ್ಲಿ ದಾಖಲಾಗಿದ್ದು ಆಧಾರ್ ಕಾರ್ಡ್ ನ ಸಾಂವಿಧಾನಿಕ ಸಿಂಧುತ್ವ ಕುರಿತು ಸುಪ್ರೀಂಕೋರ್ಟ್ ನಲ್ಲಿ ಚರ್ಚೆಯಾಗಲಿದೆ. 
ಕಳೆದ ಅಕ್ಟೋಬರ್ ನಲ್ಲಿ ಸುಪ್ರೀಂಕೋರ್ಟ್ ಆಧಾರ್ ಕುರಿತು ಎದ್ದಿರುವ ಪ್ರಶ್ನೆಗಳಿಗೆ ಅಂತ್ಯ ಹಾಡುವ ಸಲುವಾಗಿ ಐವರು ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯೊಂದನ್ನು ರಚಿಸಿದ್ದು ನವೆಂಬರ್ ತಿಂಗಳೊಳಗಾಗಿ ಈ ಸಮಸ್ಯೆ ಪರಿಷ್ಕರಿಸುವಂತೆ ಸೂಚಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT