ಚೆನ್ನೈ: ಜಲಪ್ರವಾಹದ ರೀತಿಯ ಪರಿಸ್ಥಿತಿ ಎದುರಿಸುತ್ತಿರುವ ಚೆನ್ನೈ ನಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆ ದಟ್ಟವಾಗಿದ್ದು, ನ.4 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಚೆನ್ನೈ ನಲ್ಲಿ ಬರೊಬ್ಬರಿ 55 ಮಿಮೀ ಮಳೆಯಾಗಿದ್ದು ಮಳೆಯಿಂದಾಗಿ ಸಂಭವಿಸಿರುವ ಸಾವಿನ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನ.4 ರಂದು ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಶನಿವಾರದ ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮೂಲಕ ತಿಳಿದುಬಂದಿದೆ. ನ.03 ರಂದು ಮುಖ್ಯಮಂತ್ರಿ ಇ.ಪಳನಿಸ್ವಾಮಿ ಚೆನ್ನೈ ನ ಜಲಾವೃತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ವಿಮಾನ ಹಾರಾಟ ಯಥಾಸ್ಥಿತಿಯಲ್ಲಿದ್ದು, ಸಾರ್ವಜನಿಕರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ.