ಪ್ರಧಾನ ಮಂತ್ರಿ ನರೇಂದ್ರ ಮೋದಿ 
ದೇಶ

ಭ್ರಷ್ಟಾಚಾರವೊಂದೆ ಕಾಂಗ್ರೆಸ್ ನ ಸಾಧನೆ: ಪ್ರಧಾನಿ ಮೋದಿ

ಭ್ರಷ್ಟಾಚಾರವೊಂದೇ ಕಾಂಗ್ರೆಸ್ ಪಕ್ಷದ ಗುರುತು ಎಂದು ಪ್ರಧಾನ ...

ಪಲಂಪುರ್(ಹಿಮಾಚಲ ಪ್ರದೇಶ): ಭ್ರಷ್ಟಾಚಾರವೊಂದೇ ಕಾಂಗ್ರೆಸ್ ಪಕ್ಷದ ಗುರುತು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟೀಕಿಸಿದ್ದಾರೆ.
ಅವರು ಇಂದು ಹಿಮಾಚಲ ಪ್ರದೇಶದ ಪಲಂಪುರ್ ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ, ಮುಖ್ಯಮಂತ್ರಿ ನೀರಭದ್ರ ಸಿಂಗ್ ಮತ್ತು ಅವರ ಪತ್ನಿ ಪ್ರತಿಭಾ ಸಿಂಗ್ ಅವರ ವಿರುದ್ಧ ವಾಗ್ದಾಳಿ ನಡೆಸಿದರು. 10 ಕೋಟಿ ರೂಪಾಯಿಗಳ ಅಕ್ರಮ ಆಸ್ತಿ ಗಳಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಲ್ಲಿನ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಭ್ರಷ್ಟಾಚಾರವೊಂದೆ ಕಾಂಗ್ರೆಸ್ ಪಕ್ಷದ ಗುರುತಾಗಿದೆ. ಕಾಂಗ್ರೆಸ್ ನ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಭ್ರಷ್ಟಾಚಾರದಿಂದ ಮಾತ್ರ ಗುರುತಿಸಿಕೊಂಡಿದ್ದಾರೆ ಎಂದರು.
ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಮಾಜಿ ಮುಖ್ಯಮಂತ್ರಿ ಪ್ರೇಮ್ ಕುಮಾರ್ ದುಮಲ್ ಅವರ ಕೊಡುಗೆಗಳನ್ನು ಜನತೆ ಸ್ಮರಿಸಲಿದ್ದು ನೀರಾವರಿ ಕ್ಷೇತ್ರದಲ್ಲಿನ ಕೆಲಸಗಳಿಗೆ ಶಾಂತ ಕುಮಾರ್ ಅವರ ಕೊಡುಗೆಗಳನ್ನು ಕೂಡ ಸ್ಮರಿಸಲಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರದ್ದು ಭ್ರಷ್ಟಾಚಾರವೊಂದೆ ಸಾಧನೆ ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!