ಬಂಧಿತ ಶಂಕಿತ ಉಗ್ರ 
ದೇಶ

ಮುಂಬೈನಲ್ಲಿ ಶಂಕಿತ ಇಸಿಸ್ ಭಯೋತ್ಪಾದಕನ ಬಂಧನ!

ಮಹತ್ವದ ಕಾರ್ಯಾಚರಣೆಯಲ್ಲಿ ಮುಂಬೈನಲ್ಲಿ ಶಂಕಿತ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಭಯೋತ್ಪಾದಕನನ್ನು ಭಯೋತ್ಪಾದಕ ನಿಗ್ರಹ ದಳ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.

ಮುಂಬೈ: ಮಹತ್ವದ ಕಾರ್ಯಾಚರಣೆಯಲ್ಲಿ ಮುಂಬೈನಲ್ಲಿ ಶಂಕಿತ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಭಯೋತ್ಪಾದಕನನ್ನು ಭಯೋತ್ಪಾದಕ ನಿಗ್ರಹ ದಳ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.
ಮೂಲಗಳ ಪ್ರಕಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರ ಅಬು ಜೈದ್ ಎಂಬಾತನನ್ನು ಬಂಧಿಸಲಾಗಿದ್ದು, ಪಶ್ಚಿಮ ಉತ್ತರ ಪ್ರದೇಶದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಜಾಲವನ್ನು ಈತ ಹೊಂದಿದ್ದು ಎಂದು  ಹೇಳಲಾಗಿದೆ. ಪೊಲೀಸರು ತಿಳಿಸಿರುವಂತೆ ದುಬೈನಲ್ಲಿ ನೆಲೆಸಿರುವ ಈತ ಮುಂಬೈಗೆ ಆಗಮಿಸಿದಾಗ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಹಿಂದೆಯೂ ಕೂಡ ಸಾಕಷ್ಟು ಬಾರಿ ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ಬಂಧನಕ್ಕೀಡಾಗಿದ್ದ ಶಂಕಿತ ಉಗ್ರರಿಂದ ಈತನ ಹೆಸರು ಪದೇ ಪದೇ ಕೇಳಿಬರುತ್ತಿತ್ತು. ಹೀಗಾಗಿ ಈತನ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದ ಉತ್ತರ  ಪ್ರದೇಶ ಎಟಿಎಸ್ ಅಧಿಕಾರಿಗಳು ಈತ ಭಾರತಕ್ಕೆ ಬರುವ ಕುರಿತು ಖಚಿತ ಮಾಹಿತಿ ಪಡೆದು ಇಂದು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. 
ಕಳೆದ ವಾರವಷ್ಟೇ ಕೇರಳದ ಕಣ್ಣೂರಿನಲ್ಲಿ 5 ಮಂದಿ ಶಂಕಿತ ಇಸಿಸ್ ಉಗ್ರರನ್ನು ಬಂಧಿಸಲಾಗಿತ್ತು. ಈ ವೇಳೆ ಎಲ್ಲರೂ ಸಿರಿಯಾಗೆ ತೆರಳಿ ಅಲ್ಲಿ ಇಸಿಸ್ ಪರ ಹೋರಾಡಲು ನಿರ್ಧರಿಸಿದ್ದರು ಎಂದು ಹೇಳಲಾಗುತ್ತಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್, ಅಮೆರಿಕ ಮತ್ತೊಂದು ವೈಮಾನಿಕ ದಾಳಿ

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್