ಗುಜರಾತ್: ಚಿರತೆ ದಾಳಿಗೆ ಇಬ್ಬರು ಮಹಿಳೆಯರು ಬಲಿ
ಗುಜರಾತ್ ನ ಜುನಗಢ ಜಿಲ್ಲೆಯಲ್ಲಿ ಚಿರತೆ ದಾಳಿಯಿಂದಾಗಿ ಇಬ್ಬರು ಮಹಿಳೆಯರು ಮೃತಪಟ್ಟಿರುವ ಎರಡು ಪ್ರತ್ಯೇಕ ಘಟನೆ....
ಅಹಮದಾಬಾದ್: ಗುಜರಾತ್ ನ ಜುನಗಢ ಜಿಲ್ಲೆಯಲ್ಲಿ ಚಿರತೆ ದಾಳಿಯಿಂದಾಗಿ ಇಬ್ಬರು ಮಹಿಳೆಯರು ಮೃತಪಟ್ಟಿರುವ ಎರಡು ಪ್ರತ್ಯೇಕ ಘಟನೆ ಸೋಮವಾರ ನಡೆದಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.
ಗಿರ್ ಅರಣ್ಯ ವಿಭಾಗದ ಮೆಂದಾರ್ಡ್ ಗ್ರಾಮದಲ್ಲಿ ಚಿರತೆ ದಾಳಿಯಿಂದಾಗಿ 50 ವರ್ಷದ ಮುಕಾಬೇನ್ ಕನಾನಿ ಎಂಬ ಮಹಿಳೆ ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇಂದು ಬೆಳಗಿನ ಗುಡಿಸಲಿನಲ್ಲಿ ಮಲಗಿದ್ದ ಕನಾನಿ ಅವರು ಚಿರತೆ ಎಳೆದೊಯ್ದು ಸಾಯಿಸಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರದೀಪ್ ಸಿಂಗ್ ಅವರು ತಿಳಿಸಿದ್ದಾರೆ.
ಇನ್ನು ಗಿರ್-ಸೋಮನಾಥ್ ಅರಣ್ಯ ವಿಭಾಗದ ಮಲಿಯಾ ಗ್ರಾಮದಲ್ಲೂ ಚಿರತೆ ದಾಳಿ ನಡೆಸಿದ್ದು, 70 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಈ ಎರಡು ನರಭಕ್ಷಕ ಚಿರತೆಗಳ ಹಿಡಿಯಲು ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಸಿಂಗ್ ಅವರು ತಿಳಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.