ಬ್ರಿಟೀಷ್ ಪ್ರಜೆ ಮ್ಯಾಥ್ಯೂ 
ದೇಶ

ಬಿಹಾರ: ಬ್ರಿಟೀಷ್ ದಂಪತಿಗಳೊಂದಿಗೆ ಅಸಭ್ಯ ವರ್ತನೆ- ಇಬ್ಬರು ಆರೋಪಿಗಳ ಬಂಧನ

ಪ್ರವಾಸಕ್ಕೆಂದು ಬಂದಿದ್ದ ಬ್ರಿಟೀಷ್ ದಂಪತಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿರುವ ಘಟನೆ ಬಿಹಾರ ಪಾಂಡರಕ್ ನಲ್ಲಿ ಮಂಗಳವಾರ ನಡೆದಿದೆ...

ಪಾಂಡರಕ್: ಪ್ರವಾಸಕ್ಕೆಂದು ಬಂದಿದ್ದ ಬ್ರಿಟೀಷ್ ದಂಪತಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿರುವ ಘಟನೆ ಬಿಹಾರ ಪಾಂಡರಕ್ ನಲ್ಲಿ ಮಂಗಳವಾರ ನಡೆದಿದೆ. 
ಗಂಗಾ ನದಿ ತೀರದ ಬಳಿ ಬ್ರಿಟೀಷ್ ದಂಪತಿಗಳು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ದಂಪತಿಗಳೊಂದಿಗೆ ಅಸಭ್ಯವಾಗಿ ವರ್ತಿಸಿರುವ ಕಿಡಿಗೇಡಿಗಳು ಅವರ ಬಳಿಯಿದ್ದ ವಸ್ತುಗಳನ್ನು ದರೋಡೆ ಮಾಡಲು ಯತ್ನಿಸಿದ್ದಾರೆಂದು ತಿಳಿದುಬಂದಿದೆ. 
ದರೋಡೆ ಮಾಡಲು ದುಷ್ಕರ್ಮಿಗಳು ಯತ್ನಿಸುತ್ತಿದ್ದಂತೆ ಬ್ರಿಟೀಷ್ ಪ್ರಜೆ ಮ್ಯಾಥ್ಯೂ ಅವರು ಬೋಟ್ ಸಹಾಯದೊಂದಿಗೆ ಸ್ಥಳದಿಂದ ನದಿಯನ್ನು ದಾಟಿದ್ದಾರೆ. ಬಳಿಕ ಗ್ರಾಮವೊಂದರ ಬಳಿ ಹೋಗಿ ಪೊಲೀಸರಿಗೆ ದೂರು ನೀಡಲಾಯಿತು ಎಂದು ಮ್ಯಾಥ್ಯೂ ಅವರು ಹೇಳಿಕೊಂಡಿದ್ದಾರೆ. 
ಬ್ರಿಟೀಷ್ ದಂಪತಿಗಳಿಂದ ದುಷ್ಕರ್ಮಿಗಳು ಕಳ್ಳತನ ಮಾಡಿದ್ದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಆರೋಪಿಗಳನ್ನು ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪಾಟ್ನ ಹಿರಿಯ ಪೊಲೀಸ್ ಅಧಿಕಾರಿ ಮನು ಮಹರಾಜ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT