ಮುಕಲ್ ರಾಯ್ 
ದೇಶ

ಅಮಿತ್ ಶಾ ನಮ್ಮ ರಾಷ್ಟ್ರೀಯ ನಾಯಕ: ಬಿಜೆಪಿ ಸೇರ್ಪಡೆ ಬಳಿಕ ಮುಕಲ್ ರಾಯ್ ಹೇಳಿಕೆ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತಾ ಶಾ ಅವರು ನನಗೆ ರಾಷ್ಟ್ರೀಯ ನಾಯಕ, ದಿಲೀಪ್ ಘೋಷ್ ಅವರು ನನಗೆ 'ಬಂಗಾಳದ ನಾಯಕ ಎಂದು ಬಿಜೆಪಿ ಸೇರ್ಪಡೆಗೊಂಡ ಬಳಿಕ ಮುಕುಲ್ ರಾಯ್ ಅವರು...

ಕೋಲ್ಕತಾ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತಾ ಶಾ ಅವರು ನನಗೆ ರಾಷ್ಟ್ರೀಯ ನಾಯಕ, ದಿಲೀಪ್ ಘೋಷ್ ಅವರು ನನಗೆ 'ಬಂಗಾಳದ ನಾಯಕ ಎಂದು ಬಿಜೆಪಿ ಸೇರ್ಪಡೆಗೊಂಡ ಬಳಿಕ ಮುಕುಲ್ ರಾಯ್ ಅವರು ಸೋಮವಾರ ಹೇಳಿದ್ದಾರೆ. 
ತೃಣಮೂಲ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಮುಕುಲ್ ರಾಯ್ ಅವರು ಕೆಲ ದಿನಗಳ ಹಿಂದಷ್ಟೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ನಿನ್ನೆ ತವರಿನಲ್ಲಿ ಬಿಜೆಪಿ ಕಾರ್ಯಕರ್ತರು ಮುಕುಲ್ ರಾಯ್ ಅವರಿಗೆ ಭರ್ಜರಿ ಸ್ವಾಗತವನ್ನು ಮಾಡಿದರು. 
ಬಳಿಕ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪರಿವರ್ತನೆ ತರಲು ಹಾಗೂ ರಾಜ್ಯದ ಶಕ್ತಿಯನ್ನು ಬದಲಿರು ಇದರೆ ಪಕ್ಷದ ರಾಜಕೀಯ ನಾಯಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಬೇಕೆಂದು ಹೇಳಿದರು. 
ಅಮಿತ್ ಭಾಯ್ ಹಾಗೂ ದಿಲೀಪ್ ಘೋಷ್ ಅವರ ನಾಯಕತ್ವದ ಅಡಿಯಲ್ಲಿ ನಾನು ಬಂಗಾಳದಲ್ಲಿ ಕಾರ್ಯನಿರ್ವಹಿಸುತ್ತೇನೆ. ಹಲವು ವರ್ಷಗಳಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯನಿರ್ವಹಿಸುತ್ತಿರುವುದನ್ನು ಗಮನಿಸಿದರೆ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ನನಗೆ ವಿಶ್ವಾಸವಿದೆ. ಬಂಗಾಳದ ಜನರು ಪ್ರತ್ಯೇಕ ಮಾರ್ಗವನ್ನು ಹುಡುಕುತ್ತಿದ್ದು, ರಾಜ್ಯದಲ್ಲಿ ಪ್ರಜಾಪ್ರಭುತ್ವ ವಾತಾವರಣ ಸೃಷ್ಟಿಸಲು ಬಿಜೆಪಿ ಆ ಪ್ರತ್ಯೇಕ ಮಾರ್ಗವಾಗಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ