ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್ 
ದೇಶ

ಕೇಂದ್ರದ ಆರ್ಥಿಕ ನೀತಿಗಳನ್ನು ಕಾಂಗ್ರೆಸ್ ಅನಗತ್ಯವಾಗಿ ಟೀಕಿಸುತ್ತಿದೆ: ರಾಜನಾಥ್ ಸಿಂಗ್

ಕೇಂದ್ರ ಸರ್ಕಾರದ ಆರ್ಥಿಕ ನೀತಿಯನ್ನು ಕಾಂಗ್ರೆಸ್ ಪಕ್ಷ ಅನಗತ್ಯವಾಗಿ ದೂಷಿಸುತ್ತಿದೆ ಎಂದು ಕೇಂದ್ರ ಗೃಹ....

ಶಿಮ್ಲಾ(ಹಿಮಾಚಲ ಪ್ರದೇಶ): ಕೇಂದ್ರ ಸರ್ಕಾರದ ಆರ್ಥಿಕ ನೀತಿಯನ್ನು ಕಾಂಗ್ರೆಸ್ ಪಕ್ಷ ಅನಗತ್ಯವಾಗಿ ದೂಷಿಸುತ್ತಿದೆ ಎಂದು ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ.
ಆರ್ಥಿಕ ರಂಗದಲ್ಲಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಅನಗತ್ಯವಾಗಿ ಟೀಕಿಸುತ್ತಿದೆ. ನೋಟುಗಳ ಅಮಾನ್ಯತೆ ಮತ್ತು ಸರಕು ಮತ್ತು ಸೇವಾ ತೆರಿಗೆ ಅತ್ಯಂತ ಬಲಿಷ್ಠ ಆರ್ಥಿಕ ಕ್ರಮಗಳು. ಭಾರತದ ಆರ್ಥಿಕತೆ ಬಲಿಷ್ಠವಾಗಿಲ್ಲದಿದ್ದರೆ ಯಾವುದೇ ವಿದೇಶಿ ಹೂಡಿಕೆದಾರರು ಇಲ್ಲಿಗೆ ಬರುತ್ತಿರಲಿಲ್ಲ. ವಿದೇಶಿ ಬಂಡವಾಳ ಹೂಡಿಕೆ ಭಾರತದಲ್ಲಿ ಹೆಚ್ಚಾಗುತ್ತಿರುವುದು ವಾಸ್ತವ ಎಂದು ಹೇಳಿದರು.
ಮುಂಬರುವ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಮೂರನೇ ಎರಡರಷ್ಟು ಮತಗಳನ್ನು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಭಾರತೀಯ ಸೇನೆಯನ್ನು ಶ್ಲಾಘಿಸಿದ ಅವರು, ಭಯೋತ್ಪಾದಕರನ್ನು ನಿಗ್ರಹಿಸಲು ಮತ್ತು ಕಾಶ್ಮೀರ ಕಣಿವೆಯಲ್ಲಿ ಅವರ ಉದ್ದೇಶವನ್ನು ಹತ್ತಿಕ್ಕಲು ಕೇಂದ್ರ ಮೀಸಲು ಪೊಲೀಸ್ ಪಡೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಜಾಗೃತ ದಳ ಒಟ್ಟಾಗಿ ಕೆಲಸ ಮಾಡುತ್ತಿದೆ. ಪಾಕಿಸ್ತಾನ ಅಪವಿತ್ರ ಅಭ್ಯಾಸಗಳಲ್ಲಿ ತೊಡಗಿದೆ. ಆದರೆ ನಮ್ಮ ಭದ್ರತಾ ಪಡೆಗಳ ಮಧ್ಯೆ ಹೊಂದಾಣಿಕೆ ಎಷ್ಟು ಉತ್ತಮವಾಗಿದೆಯೆಂದರೆ ಉಗ್ರರನ್ನು ಯಾವಾಗಲೂ ಸದೆಬಡಿಯಲಾಗುತ್ತಿದೆ ಎಂದು ಹೇಳಿದರು.
ಹಿಮಾಚಲ ಪ್ರದೇಶದಲ್ಲಿ ಇದೇ 9ರಂದು ಒಂದೆ ಹಂತದಲ್ಲಿ ಚುನಾವಣೆ ನಡೆಯಲಿದ್ದು ಡಿಸೆಂಬರ್ 18ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT