ಚೆನ್ನೈ: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಡಿಎಂಕೆ ಅಧ್ಯಕ್ಷ ಎಂ. ಕರುಣಾನಿಧಿ ಭೇಟಿಯಲ್ಲಿ ಯಾವುದೇ ರೀತಿಯ ರಾಜಕೀಯವಿಲ್ಲ ಎಂದು ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಅವರು ಸೋಮವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಕರುಣಾನಿಧಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ಹಿಂದೆ ಯಾವುದೇ ರೀತಿಯ ರಾಜಕೀಯ ಉದ್ದೇಶಗಳಿರಲಿಲ್ಲ. ಇಬ್ಬರ ನಡುವೆ ಯಾವುದೇ ರೀತಿಯ ರಾಜಕೀಯ ಮಾತುಕತೆಗಳು ನಡೆದಿಲ್ಲ ಎಂದು ಹೇಳಿದ್ದಾರೆ.
ಮಾಧ್ಯಮಗಳು ವರದಿ ಮಾಡುತ್ತಿರುವಂತೆ ಮೋದಿ ಹಾಗೂ ಕರುಣಾನಿಧಿ ನಡುವೆ ಯಾವುದೇ ರೀತಿಯ ರಾಜಕೀಯ ಮಾತುಕತೆಗಳು ನಡೆದಿಲ್ಲ ಎಂದು ತಿಳಿಸಿದ್ದಾರೆ. ಇದೇ ವೇಳೆ ವ್ಯಂಗ್ಯಚಿತ್ರಕಾರ ಜಿ. ಬಾಲಾ ಅವರ ಬಂಧನವನ್ನು ತೀವ್ರವಾಗಿ ಖಂಡಿಸಿದ್ದಾರೆ.