ಶಿಮ್ಲಾದಲ್ಲಿ ತಮ್ಮ ಹಕ್ಕು ಚಲಾಯಿಸಿದ ಮತದಾರರು 
ದೇಶ

ಹಿಮಾಚಲ ಪ್ರದೇಶದಲ್ಲಿ ದಾಖಲೆಯ ಶೇ.74ರಷ್ಟು ಮತದಾನ, ಬಿಜೆಪಿ, ಕಾಂಗ್ರೆಸ್ ನಡುವೆ ತೀವ್ರ ಸ್ಪರ್ಧೆ

ಪರ್ವತ ರಾಜ್ಯ ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ನಡೆದ ಒಂದೇ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು,....

ಶಿಮ್ಲಾ: ಪರ್ವತ ರಾಜ್ಯ ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ನಡೆದ ಒಂದೇ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ದಾಖಲೆಯ ಶೇ.74ರಷ್ಟು ಮತದಾನವಾಗಿದೆ ಎಂದು ಚುನಾವಣಾ ಅಧಿಕಾರಿಗಳು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಮುಖ್ಯಮಂತ್ರಿ ವೀರಭದ್ರ ಸಿಂಗ್, 10 ಮಂದಿ ಸಚಿವರು, ಎಂಟು ಮುಖ್ಯ ಸಂಸದೀಯ ಕಾರ್ಯದರ್ಶಿಗಳು, ಉಪ ಸ್ಪೀಕರ್ ಜಗತ್ ಸಿಂಗ್, ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಪ್ರೇಮ್ ಕುಮಾರ್ ದ್ಹುಮಲ್ ಹಾಗೂ ಇನ್ನೂ ಅನೇಕ ಪ್ರಮುಖರು ಇಂದು ಬೆಳಗ್ಗೆಯೇ ತಮ್ಮ ಹಕ್ಕು ಚಲಾಯಿಸಿದರು.
ಈ ಬಾರಿಯ ಚುನಾವಣೆಯಲ್ಲಿ 62 ಮಂದಿ ಶಾಸಕರು ಸೇರಿದಂತೆ 337 ಅಭ್ಯರ್ಥಿಗಳು ಸ್ಪರ್ಧಾಕಣದಲ್ಲಿದ್ದಾರೆ. ಡೂನ್ ವಿಧಾನಸಭಾ ಕ್ಷೇತ್ರದಲ್ಲಿ 9 ಮತಯಂತ್ರಗಳು ಕೆಟ್ಟು ಹೋದ ಬಗ್ಗೆ ವರದಿಯಾಗಿದೆ. ಕೆಲವು ಕಡೆ ವಿದ್ಯುನ್ಮಾನ ಮತಯಂತ್ರಗಳು ಕೈ ಕೊಟ್ಟಿರುವುದನ್ನು ಬಿಟ್ಟರೆ ಬಹುತೇಕ ಮತದಾನ ಶಾಂತಿಯುತವಾಗಿ ಅಂತ್ಯಗೊಂಡಿದೆ.
ಶಿಮ್ಲಾದಲ್ಲಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ತಮ್ಮ ಕುಟುಂಬದವರ ಜೊತೆ ಮತ ಚಲಾಯಿಸಿದರು. ಕಾಂಗ್ರೆಸ್ ಪಕ್ಷ ಬಹುಮತದಿಂದ ಗೆಲುವು ಸಾಧಿಸಲಿದೆ ಎಂದು ವೀರಭದ್ರ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸಿಎಂ ಅಭ್ಯರ್ಥಿ ಪ್ರೇಮ್ ಕುಮಾರ್ ದುಮಲ್ ತಮ್ಮ ಕುಟುಂಬದವರ ಜೊತೆ ಸಮಿರ್ಪುರ್ ಕ್ಷೇತ್ರದಲ್ಲಿ ಹಕ್ಕು ಚಲಾಯಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದ್ಹುಮಲ್, ನಾವು 50ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿ ಹೊಂದಿದ್ದೇವೆ ಎಂದರು.
ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೇ ನೇರ ಹಣಾಹಣಿ ಏರ್ಪಟ್ಟಿದ್ದು, ಅಂತಿಮವಾಗಿ ಮತದಾರ ಯಾರ ಕೈಹಿಡಿಲಿದ್ದಾನೆ ಎಂಬುದು ಡಿಸೆಂಬರ್ 18ರಂದು ಬಹಿರಂಗವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT