ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಪ್ರಧಾನಿ ಮೋದಿಯಂತೆ ಉಪನ್ಯಾಸ ನೀಡಲು ನನಗೆ ವರ್ಷಗಟ್ಟಲೆ ಸಮಯ ಬೇಕು: ರಾಹುಲ್ ಗಾಂಧಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರಂತೆ ಉಪನ್ಯಾಸ ನೀಡಲು ನನಗೆ ವರ್ಷಗಟ್ಟಲೆ ಸಮಯ ಬೇಕು ಎಂದು ಕಾಂಗಾರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಬುಧವಾರ ವ್ಯಂಗ್ಯವಾಡಿದ್ದಾರೆ...

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
Manjula VN
Updated On : 9 Nov 2017, 2:09 am
ಸೂರತ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರಂತೆ ಉಪನ್ಯಾಸ ನೀಡಲು ನನಗೆ ವರ್ಷಗಟ್ಟಲೆ ಸಮಯ ಬೇಕು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಬುಧವಾರ ವ್ಯಂಗ್ಯವಾಡಿದ್ದಾರೆ. 
ಸೂರತ್ ನಲ್ಲಿ ನಡೆದ ಉದ್ಯಮ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿರುವ ಅವರು, ಪ್ರಧಾನಿ ಮೋದಿಯವರಂತೆ ಉಪನ್ಯಾಸ ನೀಡಲು ನನಗೆ ವರ್ಷಗಟ್ಟಲೆ ಸಮಯಬೇಕು. ಆದರೆ, ಜನರ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಸೂಕ್ತ ಪರಿಹಾರ ನೀಡುವುದು ನನ್ನ ಆದ್ಯ ಕರ್ತವ್ಯವೆಂದು ಎಂದು ಹೇಳಿದ್ದಾರೆ. 
ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸಾಕಷ್ಟು ವ್ಯತ್ಯಾಸಗಳಿವೆ. ಬಿಜೆಪಿಯವರಿಗೆ ಭಾಷಣ ಮಾಡುವುದು ಬರುತ್ತದೆಯೇ ಹೊರತು, ಜನರ ಸಮಸ್ಯೆಗಳನ್ನು ಆಲಿಸುವುದು ಗೊತ್ತಿಲ್ಲ. ಬಿಜೆಪಿಯವರು ಉತ್ತಮವಾಗಿ ಮಾತನಾಡುತ್ತಾರೆ. ಪ್ರಧಾನಿ ಮೋದಿಯವರಂತೆ ನಾನು ಉಪನ್ಯಾಸ ನೀಡಲು ಸಾಧ್ಯವಿಲ್ಲ. ಮೋದಿಯವರಂತೆ ಉಪನ್ಯಾಸ ನೀಡಲು ನನಗೆ ವರ್ಷಾನುಗಟ್ಟಲೆ ಸಮಯ ಬೇಕಾಗುತ್ತದೆ. ನನ್ನ ಆಲೋಚನಾ ವಿಧಾನ ಬದಲಾಗಿದೆ. 

Advertisement

Advertisement

ಈ ಹಿಂದೆ ದುರ್ಬಲರಿಗೆ ಸಹಾಯ ಮಾಡಲು ನಾನು ಬಯಸಿದ್ದೆ. ಆದರೆ,ಇದೀಗ ಇಡೀ ವ್ಯವಸ್ಥೆಯನ್ನು ಬಲಗೊಳಿಸಲು ಬಯಸಿದ್ದೇನೆ. ನಿಮ್ಮ ಸಮಸ್ಯೆಗಳನ್ನು ನಮಗೆ ಬರವಣಿಗೆ ಮೂಲಕ ತಿಳಿಸಿ. ಸಮಸ್ಯೆಗಳನ್ನು ಬಗೆಹರಿಸುತ್ತೇನೆಂದು ನಾನು ಭರವಸೆಗಳನ್ನು ನೀಡುವುದಿಲ್ಲ. ಆದರೆ, ಈ ಬಗ್ಗೆ ಚಿಂತನೆ ನಡೆಸುತ್ತೇನೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ ಆದರೆ, ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುತ್ತೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments