ಅರವಿಂದ್ ಕೇಜ್ರಿವಾಲ್-ಅಮರಿಂದರ್ ಸಿಂಗ್ 
ದೇಶ

ದೆಹಲಿಯಲ್ಲಿ ದಟ್ಟ ಮಂಜು: ಕೇಜ್ರಿವಾಲ್-ಅಮರಿಂದರ್ ಸಿಂಗ್ ಟ್ವಿಟರ್ ಯುದ್ಧ!

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಯುಮಾಲಿನ್ಯದ ಪರಿಣಾಮವಾಗಿ ದೆಹಲಿಯಲ್ಲಿ ದಟ್ಟ ಮಂಜು ಆವರಿಸಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್-ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನಡುವೆ ಟ್ವಿಟರ್ ನಲ್ಲಿ ವಾಗ್ಯುದ್ಧ ನಡೆದಿದೆ.

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಯುಮಾಲಿನ್ಯದ ಪರಿಣಾಮವಾಗಿ ದೆಹಲಿಯಲ್ಲಿ ದಟ್ಟ ಮಂಜು ಆವರಿಸಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್-ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನಡುವೆ ಟ್ವಿಟರ್ ನಲ್ಲಿ ವಾಗ್ಯುದ್ಧ ನಡೆದಿದೆ. 
ಹರ್ಯಾಣ-ಪಂಜಾಬ್ ನಲ್ಲಿ ಬೆಳೆಯ ಕೊಯ್ಲಿನ ನಂತರ ಉಳಿಯುವ ತ್ಯಾಜ್ಯವನ್ನು ದಹನ ಮಾಡುವುದರಿಂದ ಹೊಗೆ ಆವರಿಸುತ್ತಿದೆ. ದೆಹಲಿಯಲ್ಲಿ ದಟ್ಟ ಮಂಜು ಆವರಿಸಿರುವುದಕ್ಕೆ ಪರಿಹಾರವನ್ನು ಕೇಂದ್ರವೇ ನೀಡಬೇಕು ಎಂದು ಅಮರಿಂದರ್ ಸಿಂಗ್ ಹೇಳಿದ್ದು, ಅಸಹಾಯಕತೆ ವ್ಯಕ್ತಪಡಿಸಿರುವ ಅಮರಿಂದರ್ ಸಿಂಗ್ ವಿರುದ್ಧ ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

My office continuously trying to take time from CMs of Punjab n Haryana for me to meet the two CMs. Its an emergency

— Arvind Kejriwal (@ArvindKejriwal) November 8, 2017

ಮಂಗಳವಾರದಿಂದ ದೆಹಲಿಯಲ್ಲಿ ದಟ್ಟ ಮಂಜು ಆವರಿಸಿದ್ದು, ಕೇವಲ ಬೆಳೆಯ ಕೊಯ್ಲಿನ ನಂತರ ಉಳಿಯುವ ತ್ಯಾಜ್ಯವನ್ನು ದಹನ ಮಾಡುವುದರಿಂದಷ್ಟೇ ಅಲ್ಲದೇ ವಾಹನಗಳಿಂದ ಉಂಟಾಗುವ ವಾಯುಮಾಲಿನ್ಯವೂ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. 

ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹರ್ಯಾಣ ಹಾಗು ಪಂಜಾಬ್ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುವುದಕ್ಕೆ ಸಮಯ ಕೇಳುತ್ತಿರುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು