ಹರಿಯಾಣ ರಾಜ್ಯ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್
ನವದೆಹಲಿ: ರಾಜಧಾನಿ ದೆಹಲಿ ಬಳಿಡ ಇಡೀ ಉತ್ತರ ಭಾರತದಾದ್ಯಂತ ವಾಯುಮಾಲಿನ್ಯ ವ್ಯಾಪಿಸತೊಡಗಿದ್ದು, ಈ ಹಿನ್ನಲೆಯಲ್ಲಿ ಹರಿಯಾಣ ರಾಜ್ಯ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ವಾಯುಮಾಲಿನ್ಯ ಕುರಿತು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗುರುವಾರ ಹೇಳಿದ್ದಾರೆ.
ವಾಯುಮಾಲಿನ್ಯದಿಂದ ಎದುರಾಗಲಿರುವ ನಷ್ಟವನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ವಾಯುಮಾಲಿನ್ಯ ತಡೆಗಟ್ಟಲು ಹಾಗೂ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನೆರೆ ರಾಜ್ಯಗಳೊಂದಿಗೆ ಚರ್ಚೆ ನಡೆಸಬೇಕೆಂದಿದ್ದರೆ, ಅದಕ್ಕೆ ನಾವು ಸಿದ್ಧರಿದ್ದೇವೆಂದು ಹೇಳಿದ್ದಾರೆ.
ವಾಯುಮಾಲಿನ್ಯ ಹೆಚ್ಚುತ್ತಿರುವುದು ಅತ್ಯಂತ ಪ್ರಮುಖ ವಿಚಾರ. ರಾಜ್ಯ ಸರ್ಕಾರ ಈಗಾಗಲೇ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಬೆಂಕಿ ಹಚ್ಚುವುದು, ಸುಡುವಿಕೆಯನ್ನು ನಿಲ್ಲಿಸುವಂತೆ ಈಗಾಗಲೇ ನಾವು ಜನತೆ ಬಳಿ ಮನವಿ ಮಾಡಿಕೊಂಡಿದ್ದೇವನೆ. ಪಂಜಾಬ್ ಅಥವಾ ಕೇಂದ್ರದೊಂದಿಗೆ ಮಾತುಕತೆ ನಡೆಸುವಂತೆ ತಿಳಿಸಿದ್ದೇ ಆದರೆ, ನಾವು ಅದಕ್ಕೆ ಸಿದ್ಧರಿದ್ದೇವೆಂದು ತಿಳಿಸಿದ್ದಾರೆ.