ಅನುರಾಗ್ ಥಾಕೂರ್ 
ದೇಶ

ಗುಜರಾತ್ ಚುನಾವಣೆ ನಂತರ ಹಲವು ನಾಯಕರು ಕಾಂಗ್ರೆಸ್ ತೊರೆಯಲಿದ್ದಾರೆ: ಅನುರಾಗ್ ಥಾಕೂರ್

ಗುಜರಾತ್ ವಿಧಾನಸಭೆ ಚುನಾವಣೆಯ ನಂತರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಯಕತ್ವದಿಂದ ಅಸಮಾಧಾನಗೊಂಡಿರುವ....

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯ ನಂತರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಯಕತ್ವದಿಂದ ಅಸಮಾಧಾನಗೊಂಡಿರುವ ಹಲವು ಹಿರಿಯ ಕಾಂಗ್ರೆಸ್ ನಾಯಕರು ಪಕ್ಷ ತೊರೆಯಲಿದ್ದಾರೆ ಎಂದು ಬಿಜೆಪಿ ಸಂಸದ ಅನುರಾಗ್ ಥಾಕೂರ್ ಅವರು ಶುಕ್ರವಾರ ಹೇಳಿದ್ದಾರೆ.
2019ರ ಲೋಕಸಭೆ ಚುನಾವಣೆಗೂ ಮುನ್ನವೇ ಬಿಜೆಪಿಯ 'ಕಾಂಗ್ರೆಸ್ ಮುಕ್ತ ಭಾರತ' ಘೋಷಣೆ ನಿಜವಾಗಲಿದೆ ಎಂದು ಅನುರಾಗ್ ಥಾಕೂರ್ ಅವರು ಹೇಳಿದ್ದಾರೆ.
ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ ಎಂದು ಹಲವು ಹಿರಿಯ ಕಾಂಗ್ರೆಸ್ ನಾಯಕರಿಗೆ ಭಾವಿಸಿದ್ದು, ಡಿಸೆಂಬರ್ 18ರಂದು ನಡೆಯುವ ಗುಜರಾತ್ ವಿಧಾನಸಭೆ ಚುನಾವಣೆಯ ನಂತರ ಅವರೆಲ್ಲರೂ ಪಕ್ಷ ತೊರೆಯಲಿದ್ದಾರೆ ಎಂದು ಥಾಕೂರ್ ತಿಳಿಸಿದ್ದಾರೆ.
ಇನ್ನು ಶೀಘ್ರದಲ್ಲೇ ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಥಾಕೂರ್, ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗುವುದರಿಂದ ಯಾವುದೇ ಬದಲಾವಣೆ ತರಲು ಸಾಧ್ಯವಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್