ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಕಳೆದ ಹಲವು ತಿಂಗಳಿಂದ ಖಾಲಿ ಉಳಿದಿರುವ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಕೂಡಲೇ ಉಪ ಚುನಾವಣೆ ನಡೆಸುವಂತೆ ಕಾಂಗ್ರೆಸ್ ಶನಿವಾರ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದೆ.
ಕಳೆದ ಫೆಬ್ರವರಿಯಿಂದ ಖಾಲಿ ಇರುವ ಪೂರ್ವ ಕಮೆಂಗ್ ಜಿಲ್ಲೆಯ ಪಕ್ಕೆ-ಕೆಸಾಂಗ್ ವಿಧಾನಸಭಾ ಕ್ಷೇತ್ರ ಮತ್ತು ಲೋಯರ್ ಸಯಾಂಗ್ ಜಿಲ್ಲೆಯ ಲಿಕಾಬಲಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸುವಂತೆ ಅರುಣಾಚಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ತಕ್ಕಂ ಸಂಜೊಯ್ ಅವರು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅಚಲ್ ಕುಮಾರ್ ಜ್ಯೋತಿ ಅವರಿಗೆ ಪತ್ರ ಬರೆದಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಕಮೆಂಗ್ ದೋಲೋ ಅವರ ಸದಸ್ಯತ್ವ ಕಳೆದುಕೊಂಡಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಆಯೋಗ ಕಳೆದ ಜುಲೈ 29ರಂದು ಉಪ ಚುನಾವಣೆ ಘೋಷಿಸಿತ್ತು. ಆದರೆ ಕೆಟ್ಟ ಹವಾಮಾನದ ಹಿನ್ನೆಯಲ್ಲಿ ಚುನಾವಣೆಯನ್ನು ರದ್ದುಗೊಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics