ದೇಶ

ರಯಾನ್‌ ಕೊಲೆ ಪ್ರಕರಣ: ಆರೋಪಿ ಬಾಲಕನಿಗೆ ನವೆಂಬರ್ 22ರ ವರೆಗೆ ರಿಮ್ಯಾಂಡ್ ಹೋಮ್

Lingaraj Badiger
ಗುರುಗ್ರಾಮ: ರಯಾನ್ ಇಂಟರ್ ನ್ಯಾಷನಲ್ ಶಾಲೆಯ 2ನೇ ತರಗತಿಯ ವಿದ್ಯಾರ್ಥಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ 11ನೇ ತರಗತಿಯ ವಿದ್ಯಾರ್ಥಿಯನ್ನು ಬಾಲ ನ್ಯಾಯಾಲಯ ನವೆಂಬರ್ 22ರ ವರೆಗೆ ರಿಮ್ಯಾಂಡ್ ಹೋಮ್ ಗೆ ಒಪ್ಪಿಸಿದೆ.
ಹೆಚ್ಚಿನ ವಿಚಾರಣೆಗಾಗಿ ಬಾಲಕನನ್ನು ಮೂರು ದಿನಗಳ ಕಾಲ ತನ್ನ ವಶಕ್ಕೆ ಪಡೆದಿದ್ದ ಸಿಬಿಐ ಇಂದು ಆರೋಪಿಯನ್ನು ಬಾಲ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್, ಬಾಲಕನನ್ನು ರಿಮ್ಯಾಂಡ್ ಹೋಮ್ ಗೆ ಒಪ್ಪಿಸಿ ವಿಚಾರಣೆಯನ್ನು ನವೆಂಬರ್ 22ಕ್ಕೆ ಮುಂದೂಡಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
ಈ ಮಧ್ಯೆ ಆರೋಪಿ ಬಾಲಕನ ತಂದೆ ಸಿಬಿಐ ಅಧಿಕಾರಿಗಳು ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 
ಸೆಪ್ಟೆಂಬರ್ 8ರಂದು ಎಂದಿನಂತೆ ಶಾಲೆಗೆ ತೆರಳಿದ್ದ ಎರಡನೇ ತರಗತಿ ವಿದ್ಯಾರ್ಥಿ ಪ್ರದ್ಯುಮನ್ ಠಾಕೂರ್‌ ಮೃತದೇಹ ಶಾಲೆಯ ಶೌಚಾಲಯದಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. 
SCROLL FOR NEXT