ದೇಶ

ವೃತ್ತಿಶಿಕ್ಷಣ ಪ್ರವೇಶ ಪರೀಕ್ಷೆಗಳಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ) ರಚನೆಗೆ ಕೇಂದ್ರ ಸಂಪುಟ ಅಸ್ತು

Raghavendra Adiga
ನವದೆಹಲಿ: ಎಂಜಿನಿಯರಿಂಗ್, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪರೀಕ್ಷೆ ನಡೆಸುವ ವಿಚಾರದಲ್ಲಿ ಉಂಟಾಗಿರುವ ಗೊಂದಲ, ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ಇದೀಗ ಕೇಂದ್ರ ಸರ್ಕಾರ ಮುಂದಾಗಿದೆ. ಈ ಸಂಬಂಧ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ) ರಚನೆಗೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.
ಸರ್ಕಾರದ ಈ ತೀರ್ಮಾನದಿಂದ ವೃತ್ತಿಪರ ಪ್ರವೇಶ ಪರೀಕ್ಷೆ ನಡೆಸಲು ಸ್ವಾಯತ್ತ ಸಂಸ್ಥೆಯೊಂದಕ್ಕೆ ಅಧಿಕಾರ ನೀಡುವ ಪ್ರಕ್ರಿಯೆಗೆ ಚಾಲನೆ ಸಿಗಲಿದ್ದು ಪ್ರವೇಶ ಪರೀಕ್ಷೆಗಳನ್ನು ನಡೆಸುವ ಕ್ಲಿಷ್ಟಕರ ಹೊಣೆಗಾರಿಕೆ ಯಿಂದ ಸಿಬಿಎಸ್‍ಸಿ, ಎಐಸಿಟಿಇ ಮತ್ತು ಇತರ ಸಂಸ್ಥೆಗಳು ಪಾರಾಗಲಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದೆ.
ನೂತನವಾಗಿ ರಚನೆಯಾಗಲಿರುವ ಎನ್‍ ಟಿಎ,  ಉನ್ನತ ಮಟ್ಟದ ವಿಶ್ವಾಸಾರ್ಹತೆ, ವಿದ್ಯಾರ್ಥಿಗಳ ಸಾಮಥ್ರ್ಯಗಳನ್ನು ಮಾಪನ ಮಾಡುವ ಐಚ್ಚಿಕ, ಬುದ್ದಿಮತ್ತೆ ಮತ್ತು ಇತರ ವಿಷಯಗಳಲ್ಲಿ ತಲೆದೋರುವ ಸಮಸ್ಯೆಗಳನ್ನು ಸರಳವಾಗಿಸಲಿದೆ.
ಜಂಟಿ ಎಂಜಿನಿಯರಿಂಗ್ ಪರೀಕ್ಷೆ (ಜೆಇಇ), ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್), ಯುಜಿಸಿಯ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ವರ್ಷಕ್ಕೆರಡು ಬಾರಿ), ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (ವರ್ಷಕ್ಕೆರಡು ಬಾರಿ) ಹಾಗೂ ಜವಹರ್ ನವೋದಯ ವಿದ್ಯಾಲಯಗಳ ಪ್ರವೇಶ ಪರೀಕ್ಷೆಗಳ ಉಸ್ತುವಾರಿಯನ್ನು ಎನ್‍ಟಿಎ ವಹಿಸಲಿದೆ.
ಭಾರತೀಯ ಸೊಸೈಟಿಗಳ ನೋಂದಣಿ ಕಾಯ್ದೆ, 1869ರ ಅಡಿ ಎನ್‍ಟಿಎಯನ್ನು ಒಂದು ಸಂಸ್ಥೆಯಾಗಿ ನೊಂದಣಿ ಮಾದಲಾಗುತ್ತದೆ. ಆ ಸಂಸ್ಥೆಗೆ ಸ್ವಾಯತ್ತ ಸ್ಥಾನಮಾನ ನೀಡಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪರೀಕ್ಷೆಗಳನ್ನು ಪಾರದರ್ಶಕ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಅನುವು ಮಾಡಿಕೊಡಲಾಗುವುದು. ಎಂದು ಸರ್ಕಾರದ ಮೂಲಗಳು ತಿಳಿಸಿದೆ.
SCROLL FOR NEXT