ಪಾಟ್ನಾ: ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಪೊಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಆರೋಪಿಸಿರುವ ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಕೇಂದ್ರ ಸರ್ಕಾರ ನೋಟು ನಿಷೇಧ ಹಾಗೂ ಜಿಎಸ್ ಟಿಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಈ ಎರಡೂ ನಿರ್ಧಾರಗಳು ತಪ್ಪೆಂದು ಸರ್ಕಾರಕ್ಕೂ ಅರ್ಥವಾಗಿದೆ. ಆದ್ದರಿಂದಲೇ ಜಿಎಸ್ ಟಿ ತೆರಿಗೆ ವ್ಯಾಪ್ತಿಯನ್ನು ಇಳಿಕೆ ಮಾಡಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪೊಳ್ಳು ಭರವಸೆ ಎಂಬುದನ್ನು ಸಾಬೀತುಪಡಿಸಿದೆ. ದೇಶದಲ್ಲಿ ತುರ್ತು ಪರಿಸ್ಥಿತಿ ಮಾದರಿಯ ಪರಿಸ್ಥಿತಿ ಇದೆ ಎಂದು ಲಾಲು ಪ್ರಸಾದ್ ಯಾದವ್ ಆರೋಪಿಸಿದ್ದಾರೆ.
ಜನತೆಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಿರುವ ಜಿಎಸ್ ಟಿ, ನೋಟು ನಿಷೇಧವನ್ನು ಕೂಡಲೇ ಕೇಂದ್ರ ಸರ್ಕಾರ ವಾಪಸ್ ಪಡೆಯಬೇಕೆಂದು ಲಾಲು ಒತ್ತಾಯಿಸಿದ್ದಾರೆ.