ಫಿಲಿಫೈನ್ಸ್ ಗೆ ಹೊರಟ ಪ್ರಧಾನ ಮಂತ್ರಿ ನರೇಂದ್ರ ಮೋದಿ 
ದೇಶ

ಆಸಿಯಾನ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಫಿಲಿಫೈನ್ಸ್ ಗೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ

ಭಾರತ-ಆಸಿಯಾನ್ ಶೃಂಗಸಭೆ ಸೇರಿದಂತೆ ಹಲವು ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು...

ನವದೆಹಲಿ: ಭಾರತ-ಆಸಿಯಾನ್ ಶೃಂಗಸಭೆ ಸೇರಿದಂತೆ ಹಲವು ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಫಿಲಿಫೈನ್ಸ್ ಗೆ ತೆರಳಿದ್ದಾರೆ.
ಭಾರತ-ಆಸಿಯಾನ್ ಶೃಂಗಸಭೆಯಲ್ಲಿ ಭಾಗವಹಿಸಲು ತಾವು ಫಿಲಿಫೈನ್ಸ್ ಗೆ ಭೇಟಿ ನೀಡುತ್ತಿರುವುದು ಆಸಿಯಾನ್ ರಾಷ್ಟ್ರಗಳೊಂದಿಗೆ ಭಾರತದ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಬದ್ಧತೆಯನ್ನು ತೋರಿಸುತ್ತಿದೆ ಎಂದು ಫಿಲಿಫೈನ್ಸ್ ಗೆ ತೆರಳುವ ಮುನ್ನ ಪ್ರಧಾನಿ ಹೇಳಿಕೆಯಲ್ಲಿ ನಿನ್ನೆ ತಿಳಿಸಿದ್ದಾರೆ. 
ತಮ್ಮ ಮೂರು ದಿನಗಳ ಭೇಟಿಯಲ್ಲಿ ಪ್ರಧಾನಿ, ಆಸಿಯಾನ್-ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸುವುದರ ಹೊರತಾಗಿ ಆಸಿಯಾನ್ ಶೃಂಗಸಭೆಯ 50ನೇ ವಾರ್ಷಿಕೋತ್ಸವದಲ್ಲಿ, ಸ್ಥಳೀಯ ಸಮಗ್ರ ಆರ್ಥಿಕ ಸಹಭಾಗಿತ್ವ(ಆರ್ ಸಿಇಪಿ) ನಾಯಕರ ಸಭೆಯಲ್ಲಿ ಮತ್ತು ಆಸಿಯಾನ್ ಆರ್ಥಿಕ ಮತ್ತು ಹೂಡಿಕೆ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
ಪ್ರಧಾನಿಯವರು ತಮ್ಮ ಭೇಟಿ ಸಂದರ್ಭದಲ್ಲಿ ಫಿಲಿಫೈನ್ಸ್ ಅಧ್ಯಕ್ಷ ರೊಡ್ರಿಗೊ ಡುಟೆರ್ಟೆ ಅವರನ್ನು ಭೇಟಿ ಮಾಡಲಿದ್ದಾರೆ. ಆಸಿಯಾನ್ ಮತ್ತು ಪೂರ್ವ ಏಷ್ಯಾ ಶೃಂಗಸಭೆ ನಾಯಕರೊಂದಿಗೆ ಕೂಡ ಸಂವಾದ ನಡೆಸಲಿದ್ದಾರೆ.
ಫಿಲಿಫೈಲ್ಸ್ ನಲ್ಲಿರುವ ಭಾರತೀಯ ಸಮುದಾಯವನ್ನು ಪ್ರಧಾನಿಯವರು ಭೇಟಿ ಮಾಡುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ