ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ 
ದೇಶ

ವಿಕಾಸಕ್ಕಲ್ಲ, ಕಾಂಗ್ರೆಸ್'ಗೆ ಹುಚ್ಚು ಹಿಡಿದಿದೆ: ರಾಹುಲ್ ವಿರುದ್ಧ ಜವಡೇಕರ್ ಕಿಡಿ

ಗುಜರಾತ್'ನಲ್ಲಿ ವಿಕಾಸಕ್ಕೆ ಅಲ್ಲ, ಕಾಂಗ್ರೆಸ್ ಪಕ್ಷಕ್ಕೆ ಹುಚ್ಚು ಹಿಡಿದಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಭಾನುವಾರ ಹೇಳಿದ್ದಾರೆ...

ಅಹಮದಾಬಾದ್: ಗುಜರಾತ್'ನಲ್ಲಿ ವಿಕಾಸಕ್ಕೆ ಅಲ್ಲ, ಕಾಂಗ್ರೆಸ್ ಪಕ್ಷಕ್ಕೆ ಹುಚ್ಚು ಹಿಡಿದಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಭಾನುವಾರ ಹೇಳಿದ್ದಾರೆ. 
ಈ ಹಿಂದಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಆಡಳಿತಾರೂಢ ಬಿಜೆಪಿಯನ್ನು ಗುರಿಯಾಗಿಸಿಕೊಂಡು ರಾಹುಲ್ ಗಾಂಧಿಯವರು ಕಿಡಿಕಾರಿದ್ದರು. ಗುಜರಾತ್ ನಲ್ಲಿ ವಿಕಾಸಕ್ಕೆ ಏನಾಗಿದೆ? ವಿಕಾಸಕ್ಕೆ ಹುಚ್ಚು ಹಿಡಿದಿದೆ...? ಸುಳ್ಳುಗಳನ್ನು ಕೇಳಿ ಕೇಳಿ ವಿಕಾಸಕ್ಕೆ ಹುಚ್ಚು ಹಿಡಿದಿದೆ ಎಂದು ಟೀಕಿಸಿದ್ದರು. 
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು, ವಿಕಾಸಕ್ಕೆ ಅಲ್ಲ, ಕಾಂಗ್ರೆಸ್ ಗೆ ಹುಚ್ಚು ಹಿಡಿದಿದೆ. ಕಾಂಗ್ರೆಸ್ ದಾರಿ ತಪ್ಪಿದೆ. ವಿಕಾಸ ಎಲ್ಲಿರಬೇಕು ಅಲ್ಲಿಯೇ ಇದೆ ಎಂದು ಟಾಂಗ್ ನೀಡಿದ್ದಾರೆ. 
ಗುಡರಾತ್ ರಾಜ್ಯದಲ್ಲಿ ಡಿಸೆಂಬರ್ 9 ಹಾಗೂ 14 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು. ಡಿಸೆಂಬರ್ 18 ರಂದು ಮತ ಎಣಿಕೆ ನಡೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್