ಸಾಂದರ್ಭಿಕ ಚಿತ್ರ 
ದೇಶ

ಪ್ರೀತಿಗೆ ನಕಾರ: ಯುವತಿಗೆ ಬೆಂಕಿ ಹಚ್ಚಿದ ಭಗ್ನ ಪ್ರೇಮಿ

ಪ್ರೀತಿ ನಿವೇದನೆಯನ್ನು ನಿರಾಕರಿಸಿದ ಯುವತಿಯೊಬ್ಬಳ ಮೇಲೆ ಭಗ್ನ ಪ್ರೇಮಿಯೊಬ್ಬ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿರುವ ಘಟನೆಯೊಂದು ಚೆನ್ನೈನಲ್ಲಿ ಸೋಮವಾರ ನಡೆದಿದೆ...

ಚೆನ್ನೈ: ಪ್ರೀತಿ ನಿವೇದನೆಯನ್ನು ನಿರಾಕರಿಸಿದ ಯುವತಿಯೊಬ್ಬಳ ಮೇಲೆ ಭಗ್ನ ಪ್ರೇಮಿಯೊಬ್ಬ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿರುವ ಘಟನೆಯೊಂದು ಚೆನ್ನೈನಲ್ಲಿ ಸೋಮವಾರ ನಡೆದಿದೆ. 
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವತಿ ಸಿಂಧುಜಾ (22) ಮೃತಪಟ್ಟಿದ್ದಾಳೆ. ಅಶೋಕ್ (26) ಯುವತಿಗೆ ಬೆಂಕಿ ಹಚ್ಚಿದ ಆರೋಪಿಯಾಗಿದ್ದಾನೆ. 
ಕೆಲ ದಿನಗಳ ಹಿಂದಷ್ಟೇ ಅಶೋಕ್, ಸಿಂಧುಜಾಗೆ ತನ್ನ ಪ್ರೀತಿಯ ನಿವೇದನೆಯನ್ನು ತಿಳಿಸಿದ್ದಾನೆ. ಇದಕ್ಕೆ ಸಿಂಧುಜಾ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಅಶೋಕ್ ನಿನ್ನೆ ಯುವತಿಯ ಮನೆಗೆ ತೆರಳಿ ಸಿಂಧುಜಾ ಜೊತೆಗೆ ಜಗಳಕ್ಕೆ ಇಳಿದಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ನಡೆದಿದೆ. ಬಳಿಕ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ಅಶೋಕ್ ಯುವತಿ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಸಿಂಧುಜಾ ನರಳಾಟವನ್ನು ಕೇಳಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಯತ್ನ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. 
ಸಿಂಧುಜಾಳನ್ನು ರಕ್ಷಣೆ ಮಾಡಲು ಹೋದ ತಾಯಿ ಹಾಗೂ ಸಹೋದರಿ ಕೂಡ ಘಟನೆಯಲ್ಲಿ ಗಾಯಗೊಂಡಿದ್ದು, ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!