ಚಂಡಿಗಢ: ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ವಾಯು ಮಾಲಿನ್ಯದ ಕುರಿತು ಮತ್ತು ಕೃಷಿ ತ್ಯಾಜ್ಯ ಸುಡುವುದರ ಬಗ್ಗೆ ಚರ್ಚಿಸುವುದಕ್ಕಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಾಡಿದ್ದ ಮನವಿಯನ್ನು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಮಂಗಳವಾರ ತಿರಸ್ಕರಿಸಿದ್ದಾರೆ.
ನಾಳೆ ಚಂಡಿಗಢದಲ್ಲಿ ತಮ್ಮನ್ನು ಭೇಟಿ ಮಾಡಲು ಅವಕಾಶ ನೀಡುವಂತೆ ಟ್ವೀಟರ್ ಮೂಲಕ ಅರವಿಂದ್ ಕೇಜ್ರಿವಾಲ್ ಅವರು ಮಾಡಿದ್ದ ಮನವಿಯನ್ನು ಪಂಜಾಬ್ ಸಿಎಂ ತಿರಸ್ಕರಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡುವುದಕ್ಕಾಗಿ ನಾಳೆ ದೆಹಲಿಗೆ ತೆರಳುತ್ತಿದ್ದಾರೆ.
ಅಮರಿಂದರ್ ಸಿಂಗ್ ಅವರು ತಮ್ಮ ಮನವಿ ತಿರಸ್ಕರಿಸಿರುವುದರ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕೇಜ್ರಿವಾಲ್ ಅವರು, ಭೇಟಿಗಾಗಿ ಪಂಜಾಬ್ ಸಿಎಂಗೆ ಮತ್ತೊಮ್ಮೆ ಮನವಿ ಮಾಡುವುದಾಗಿ ಹೇಳಿದ್ದಾರೆ.
ವಾಯು ಮಾಲಿನ್ಯ ನಿಯಂತ್ರಿಸುವಲ್ಲಿ ದೆಹಲಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಈಗ ಸಾರ್ವಜನಿಕರ ಗಮನ ಬೇರೆಡೆ ಸೆಳೆಯುವುದಕ್ಕಾಗಿ ದೆಹಲಿ ಸಿಎಂ ಈ ರೀತಿ ಭೇಟಿಯ ರಾಜಕೀಯ ಮಾಡುತ್ತಿದ್ದಾರೆ. ಅವರೊಂದಿಗೆ ಚರ್ಚೆ ಅರ್ಥಹೀನ ಎಂದು ಅಮರಿಂದರ್ ಸಿಂಗ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics