ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಲಖನೌ: ಭಾರತದಲ್ಲಿ ರಾಮನ ಕುರಿತಂತೆ ಇರುವ ಪ್ರಾಮುಖ್ಯತೆಯನ್ನು ಒತ್ತಿ ಹೇಳಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ರಾಮನಾಮ ಇಲ್ಲದೆಯೇ ಭಾರತದಲ್ಲಿ ಏನನ್ನೂ ಸಾಧಿಸಲಾಗದು ಎಂದು ಮಂಗಳವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ರಾಮನಾಮವನ್ನು ಸ್ಮರಣೆ ಮಾಡದೆಯೇ ಭಾರತದಲ್ಲಿ ಯಾವುದೇ ಏನನ್ನೂ ಸಾಧಿಸಲು ಹಾಗೂ ಯಾವುದೇ ಕೆಲಸವನ್ನು ಮಾಡಲು ಸಾಧ್ಯವಿಲ್ಲ. ರಾಮ ನಮ್ಮ ನಂಬಿಕೆಗಳನ್ನು ಪ್ರತಿನಿಧಿಸುತ್ತಿದ್ದು, ಭಾರತದಲ್ಲಿನ ಎಲ್ಲಾ ನಂಬಿಕೆಗಳ ಕೇಂದ್ರಬಿಂದು ರಾಮನಾಗಿದ್ದಾನೆಂದು ಹೇಳಿದ್ದಾರೆ.
ಅಯೋಧ್ಯೆ ರಾಮಮಂದಿರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಧಾರ್ಮಿಕ ಗುರು ಶ್ರೀ ಶ್ರೀ ರವಿ ಶಂಕರ್ ಅವರು, ರಾಮ ಮಂದಿರ ವಿವಾದದಲ್ಲಿ ಮಧ್ಯಸ್ಥಗಾರನಾಗಿ ಪಾಲ್ಗೊಳ್ಳುತ್ತಿರುವುದು ನನ್ನ ಸ್ವಇಚ್ಛೆಯಿಂದ ಎಂದು ಹೇಳಿದ್ದಾರೆ. ಅಲ್ಲದೆ, ಈ ಸಂಬಂಧ ನ.16 ರಂದು ಅಯೋಧ್ಯೆಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.
ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಡಿ.5 ರಂದು ಅಂತಿಮ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಆ.11 ರಂದು ಘೋಷಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics