ಅಮರಿಂದರ್ ಸಿಂಗ್ 
ದೇಶ

ರೈತರು ಕೃಷಿ ತ್ಯಾಜ್ಯ ಸುಡುವುದನ್ನು ಸಂಪೂರ್ಣ ನಿಲ್ಲಿಸಲು ಸಾಧ್ಯವಿಲ್ಲ: ಪಂಜಾಬ್ ಸಿಎಂ

ಕೃಷಿ ತ್ಯಾಜ್ಯ ನಿರ್ವಹಣೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವವರೆಗೆ ರೈತರು ಕೃಷಿ ತ್ಯಾಜ್ಯ ಸುಡುವುದನ್ನು ಸಂಪೂರ್ಣ ನಿಲ್ಲಿಸಲು ಸಾಧ್ಯವಿಲ್ಲ ಎಂದು....

ಚಂಡಿಗಢ: ಕೃಷಿ ತ್ಯಾಜ್ಯ ನಿರ್ವಹಣೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವವರೆಗೆ ರೈತರು ಕೃಷಿ ತ್ಯಾಜ್ಯ ಸುಡುವುದನ್ನು ಸಂಪೂರ್ಣ ನಿಲ್ಲಿಸಲು ಸಾಧ್ಯವಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ ಕೃಷಿ ತ್ಯಾಜ್ಯ ಸುಡುವುದರ ಬಗ್ಗೆ ಮತ್ತು ವಾಯು ಮಾಲಿನ್ಯದ ಕುರಿತು ಚರ್ಚಿಸಿದ ಬೆನ್ನಲ್ಲೇ ಪಂಜಾಬ್ ಸಿಎಂ ಈ ಹೇಳಿಕೆ ನೀಡಿದ್ದಾರೆ.
ರೈತರು ತಮ್ಮ ಹೊಲದಲ್ಲಿ ಕೃಷಿ ತ್ಯಾಜ್ಯವನ್ನು ಸುಡುವುದರಿಂದ ವಾಯು ಮಾಲಿನ್ಯವಾಗುತ್ತಿದ್ದು, ಇದಕ್ಕೆ ದೀರ್ಘಕಾಲಿಕ ಪರಿಹಾರ ಕಂಡುಕೊಳ್ಳುವ ಅಗತ್ಯ ಇದೆ ಮತ್ತು ಈ ಸಮಸ್ಯೆ ಸೂಕ್ತ ಪರಿಹಾರಕ್ಕಾಗಿ ಸರ್ಕಾರ ಯತ್ನಿಸುತ್ತಿದೆ ಎಂದು ಪಂಜಾಬ್ ಸಿಎಂ ಹೇಳಿದ್ದಾರೆ.
ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ವಾಯು ಮಾಲಿನ್ಯ ಪ್ರಮಾಣ ಹೆಚ್ಚಾಗಲು ಹರಿಯಾಣ ಮತ್ತು ಪಂಜಾಬ್ ರೈತರೇ ಕಾರಣ ಎಂದು ಆರೋಪಿಸಲಾಗುತ್ತಿದ್ದು, ಈ ಕುರಿತು ರೈತರಲ್ಲಿ ಜಾಗೃತಿ ಮೂಡಿಸಲಾಗುವುದು. ವಾಯು ಮಾಲಿನ್ಯದಿಂದ ಬೇರೆಯವರಿಗೆ ಮಾತ್ರವಲ್ಲ ನಮಗೂ ತೊಂದರೆಯಾಗುತ್ತದೆ ಎಂಬುದನ್ನು ಮನವರಿಕೆ ಮಾಡಿಕೊಡಲಾಗುವುದು ಎಂದು ಅಮರಿಂದರ್ ಸಿಂಗ್ ಅವರು ತಿಳಿಸಿದ್ದಾರೆ.
ರೈತರು ಕೃಷಿ ತ್ಯಾಜ್ಯ ಸುಡುವುದಕ್ಕೆ ಸಂಬಂಧಿಸಿದಂತೆ ಚರ್ಚಿಸುವುದಕ್ಕಾಗಿ ಚಂಡಿಗಢದಲ್ಲಿ ತಮ್ಮನ್ನು ಭೇಟಿ ಮಾಡಲು ಅವಕಾಶ ನೀಡುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಮಾಡಿದ್ದ ಮನವಿಯನ್ನು ನಿನ್ನೆ ಅಮರಿಂದರ್ ಸಿಂಗ್ ಅವರು ತಿರಸ್ಕರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ