ವಾಷಿಂಗ್ ಟನ್: ಪ್ರಧಾನಿ ನರೇಂದ್ರ ಮೋದಿ ಭಾರತದ ರಾಜಕಾರಣದಲ್ಲಿ ಇದುವರೆಗಿನ ಅತ್ಯಂತ ಜನಪ್ರಿಯ ನಾಯಕ ಎಂದು ಪ್ಯೂ ಸಮೀಕ್ಷೆ ನಡೆಸಿರುವ ವರದಿಯಿಂದ ತಿಳಿದುಬಂದಿದೆ.
ಭಾರತದಲ್ಲಿ ಇತ್ತೀಚಿಗೆ ನಡೆಸಿದ ಸಮೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿರುವ ಪ್ಯೂ ಸರ್ವೇ, ಪ್ರಧಾನಿ ನರೇಂದ್ರ ಮೋದಿ ಭಾರತದ ರಾಜಕಾರಣದಲ್ಲಿ ಇದುವರೆಗಿನ ಅತ್ಯಂತ ಜನಪ್ರಿಯ ನಾಯಕ ಎಂದು ಹೇಳಿದೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ (ಶೇ.58) ಗಿಂತ ಪ್ರಧಾನಿ ನರೇಂದ್ರ ಮೋದಿ ಅವರು 30 ಪಾಯಿಂಟ್ ಗಳಷ್ಟು ಮುಂದಿದ್ದು ಶೇ.88 ರಷ್ಟು ಜನಪ್ರಿಯತೆ ಹೊಂದಿದ್ದಾರೆ, ಇನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೇ.57 ರಷ್ಟು ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶೇ.39 ರಷ್ಟು ಜನಪ್ರಿಯತೆ ಹೊಂದಿದ್ದಾರೆ.
ಈ ವರ್ಷದ ಫೆಬ್ರವರಿ 21 ರಿಂದ ಮಾರ್ಚ್ 10 ವರೆಗೆ ಸಮೀಕ್ಷೆ ನಡೆಸಲಾಗಿದ್ದು, ಗುಜರಾತ್, ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಚತ್ತೀಸ್ ಗಢ ಸೇರಿದಂತೆ ದೇಶದ 9 ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಅಭಿಪ್ರಾಯವಿದೆ ಎಂದು ಸಮೀಕ್ಷೆ ಮೂಲಕ ತಿಳಿದುಬಂದಿದೆ.