ಚೆನ್ನೈ: ಹಿಂದೂ ಭಯೋತ್ಪಾದನೆ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಬೇಕು ಎಂದು ಮದ್ರಾಸ್ ಹೈಕೋರ್ಟ್ ನಲ್ಲಿ ಅರ್ಜಿ ದಾಖಲಾಗಿತ್ತು.
ಈ ಅರ್ಜಿ ಕುರಿತಂತೆ ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಎಸ್ ರಮೇಶ್ ಅವರು ಸರ್ಕಾರಿ ವಕೀಲರಿಗೆ ಈ ಪ್ರಕರಣದ ಕುರಿತಂತೆ ಪೊಲೀಸ್ ಅಧಿಕಾರಿಗಳಿಂದ ಸೂಚನೆಗಳನ್ನು ಪಡೆಯುಲು ನಿರ್ದೇಶಿಸಿದ್ದು ಜತೆಗೆ ಮುಂದಿನ ಅರ್ಜಿಯ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದರು.
ಅರ್ಜಿದಾರ ಜಿ ದೇವರಾಜನ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು ಕಮಲ್ ಹಾಸನ್ ಹಿಂದೂ ಭಯೋತ್ಪಾದನೆ ಹೇಳಿಕೆಯನ್ನು ತಮಿಳು ನಿಯತಕಾಲಿಕೆಯೊಂದು ಪ್ರಕಟಿಸಿತ್ತು. ಇದನ್ನು ಆಧಾರವಾಗಿಟ್ಟುಕೊಂಡು ಕಮಲ್ ಹಾಸನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಬೇಕು ಎಂದು ಮನವಿ ಮಾಡಿದ್ದರು.
ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಕಮಲ್ ಹಾಸನ್ ಹಿಂದೂಗಳನ್ನು ಭಯೋತ್ಪಾದಕರು ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಯಾವುದೇ ಧರ್ಮವು ಹಿಂಸಾಚಾರವನ್ನಲ್ಲ, ಶಾಂತಿಯನ್ನು ಮಾತ್ರವಲ್ಲ ಬೋದಿಸುತ್ತವೆ ಎಂಬುದನ್ನು ಅವರು ಅರ್ಥಮಾಡಿಕೊಳ್ಳಬೇಕು. ಧರ್ಮದ ಆಧಾರದ ಮೇಲೆ ತಮಿಳು ಸಮುದಾಯವನ್ನು ವಿಭಜಿಸಲು ಕಮಲ್ ಹಾಸನ್ ಯತ್ನಿಸುತ್ತಿದ್ದಾರೆ ಎಂದು ಅರ್ಜಿದಾರರು ಹೇಳಿದ್ದಾರೆ.