ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಗುಜರಾತ್ ಮುಖ್ಯಮಂತ್ರಿ ವಿಜಯ್ ರುಪಾನಿ ಸೇರಿದಂತೆ 70 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ವಿಜಯ್ ರುಪಾನಿ ಪಶ್ಚಿಮ ರಾಜ್ ಕೋಟ್ ನಿಂದ ಸ್ಪರ್ಧಿಸಲಿದ್ದಾರೆ. ಉಪಮುಖ್ಯಮಂತ್ರಿ ನಿತಿನ್ ಬಾಯ್ ಪಟೇಲ್ ಮೆಹ್ಸಾನಾ ಮತ್ತು ಗುಜರಾತ್ ಬಿಜೆಪಿ ರಾಜ್ಯಾಧ್ಯಕ್ಷ ಜಿತುಬಾಯ್ ವಘಾನಿ ಪಶ್ಚಿಮ ಭಾವನಗರದಿಂದ ಕಣಕ್ಕಿಳಿಯಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಸುಷ್ಮಾ ಸ್ವರಾಜ್ ಮತ್ತು ಬಿಜೆಪಿ ಕೇಂದ್ರಿಯ ಚುನಾವಣಾ ಸಮಿತಿ ಹಲವು ಸದಸ್ಯರು ಸಭೆ ಸೇರಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದಾರೆ.