ಶಶಿಕಲಾ ಪತಿ ನಟರಾಜನ್ 
ದೇಶ

ಶಶಿಕಲಾ ಪತಿ ನಟರಾಜನ್ ಗೆ 2 ವರ್ಷ ಕಠಿಣ ಜೈಲು ಶಿಕ್ಷೆ: ತೀರ್ಪು ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಎಐಎಡಿಎಂಕೆ ಉಚ್ಚಾಟಿತ ಪ್ರಧಾನ ಕಾರ್ಯದರ್ಶಿ ವಿ ಕೆ ಶಶಿಕಲಾ ಅವರ ಪತಿ....

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಎಐಎಡಿಎಂಕೆ ಉಚ್ಚಾಟಿತ ಪ್ರಧಾನ ಕಾರ್ಯದರ್ಶಿ ವಿ ಕೆ ಶಶಿಕಲಾ ಅವರ ಪತಿ ನಟರಾಜನ್ ಅವರಿಗೆ ಸಿಬಿಐ ವಿಶೇಷ ಕೋರ್ಟ್ ವಿಧಿಸಿದ್ದ ಎರಡು ವರ್ಷ ಕಠಿಣ ಜೈಲು ಶಿಕ್ಷೆಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ಎತ್ತಿ ಹಿಡಿದಿದೆ.
ಅಕ್ರಮವಾಗಿ ಲೆಕ್ಸಸ್ ಕಾರ್ ಅನ್ನು ಆಮದು ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 2010ರಲ್ಲಿ ಸಿಬಿಐ ವಿಶೇಷ ಕೋರ್ಟ್ ನಟರಾಜನ್ ಅವರಿಗೆ ಎರಡು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ನಟರಾಜನ್ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ ಜಯಚಂದ್ರನ್ ಅವರು, ಅಧೀನ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದ್ದಾರೆ.
1994ರಲ್ಲಿ ನಟರಾಜನ್ ಮತ್ತು ಬಾಸ್ಕರನ್ ಅವರು ಬ್ರಿಟನ್ ನಿಂದ ಐಷಾರಾಮಿ ಲೆಕ್ಸಸ್ ಕಾರ್ ಅನ್ನು ತೆರಿಗೆ ವಂಚಿಸಿ ಅಕ್ರಮವಾಗಿ ಆಮದು ಮಾಡಿಕೊಂಡಿದ್ದು, ಇದಕ್ಕೆ ಯೋಗೇಶ್ ಬಾಲಕೃಷ್ಣನ್ ಹಾಗೂ ಅಂದಿನ ಇಂಡಿಯನ್ ಒವರೀಸ್ ಬ್ಯಾಂಕ್ ಮ್ಯಾನೇಜರ್ ಸುಚರಿತ ಸುಂದರರಾಜನ್ ಅವರ ಸಹಾಯ ಪಡೆದಿದ್ದರು. ಈ ಸಂಬಂಧ ನಾಲ್ವರ ವಿರುದ್ಧ ಕಸ್ಟಮ್ಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು, ಬಳಿಕ ಅದನ್ನು ಸಿಬಿಐಗೆ ಹಸ್ತಾಂತರಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT