ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಇಂದು ಬೆಳಿಗ್ಗೆ ಪೂಂಚ್'ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಸಣ್ಣ ಹಾಗೂ ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ದಾಳಿ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಪಾಕಿಸ್ತಾನ ಸೇನೆ ಗಡಿಯಲ್ಲಿ ಪದೇ ಪದೇ ಕದನ ವಿರಾಮವನ್ನು ಉಲ್ಲಂಘನೆ ಮಾಡುತ್ತಲೇ ಇದೆ. ನಿನ್ನೆ ಕೂಡ ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು.