ಜಮ್ಮು-ಕಾಶ್ಮೀರ: 6 ಉಗ್ರರ ಹತ್ಯೆ, ಓರ್ವ ಕಮಾಂಡೋ ಹುತಾತ್ಮ
ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ 5 ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಓರ್ವ ಕಮಾಂಡೋ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀನಗರ: ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ 6 ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಓರ್ವ ಕಮಾಂಡೋ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.
ಬಂಡಿಪೋರಾ ಜಿಲ್ಲೆಯಲ್ಲಿ ಗುಂಡಿನ ಕಾಳಗ ನಡೆದಿದ್ದು, ಭಯೋತ್ಪಾದಕರು ಅಡಗಿ ಕುಳಿತಿರುವ ಮಾಹಿತಿ ಪಡೆದ ಭದ್ರತಾ ಪಡೆಗಳು ದಾಳಿ ನಡೆಸಿ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ರೈಫಲ್ಸ್(ಆರ್ ಆರ್) ವಿಶೇಷ ಕಾರ್ಯ ಪಡೆ (ಎಸ್ಒಜಿ) ಜಮ್ಮು-ಕಾಶ್ಮೀರ ಪೊಲೀಸರು, ಸಿಆರ್ ಪಿಎಫ್ ಯೋಧರು ಕಾರ್ಯಾಚರಣೆ ನಡೆಸಿದ್ದಾರೆ. ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.