ಅಹ್ಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದು, ಗುಜರಾತ್ ನ ಕಾಂಗ್ರೆಸ್ ಅಧ್ಯಕ್ಷ ಭರತ್ ಸಿನ್ಹ ಸೋಲಂಕಿ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಪಕ್ಷದೊಂದಿಗೆ ಭಿನ್ನಾಭಿಪ್ರಾಯ ಇರುವುದನ್ನು ನಿರಾಕರಿಸಿರುವ ಸೋಲಂಕಿ ಈ ಹಿಂದೆಯೇ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಘೋಷಿಸಿದ್ದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವ ಬೆನ್ನಲ್ಲೇ ಸೋಲಂಕಿ ಅವರು ಸ್ಪರ್ಧೆಯಿಂದ ಹಿಂದೆ ಸರಿದಿರುವುದು ಮಹತ್ವ ಪಡೆದುಕೊಂಡಿತ್ತು.
ಆದರೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸೋಲಂಕಿ, ತಾವು ಚುನಾವಣೆಗೆ ಸ್ಪರ್ಧಿಸದೇ ಇರುವ ನಿರ್ಧಾರವನ್ನು ಈಗ ಪ್ರಕಟಿಸುತ್ತಿಲ್ಲ, ಈ ಹಿಂದೆಯೇ ತಮ್ಮ ನಿರ್ಧಾರವನ್ನು ತಿಳಿಸಿದ್ದಾಗಿ ಹೇಳಿದ್ದಾರೆ. 182 ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ 106 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.