'ಮೋದಿಯಿಂದ ಮುಂದಿನ ವರ್ಷ ಲೋಕಸಭಾ ಚುನಾವಣೆ ಘೋಷಿಸುವ ಸಾಧ್ಯತೆ'
ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯನ್ನು ವಿಸರ್ಜಿಸಿ ಅವಧಿಪೂರ್ವ ಲೋಕಸಭಾ ಚುನಾವಣೆಯನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.
ಪಾಟ್ನ: ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯನ್ನು ವಿಸರ್ಜಿಸಿ ಅವಧಿಪೂರ್ವ ಲೋಕಸಭಾ ಚುನಾವಣೆಯನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.
2019 ರ ಬದಲಾಗಿ 2018 ಕ್ಕೇ ಮೋದಿ ಲೋಕಸಭಾ ಚುನಾವಣೆಯನ್ನು ಘೋಷಿಸುವ ಸಾಧ್ಯತೆ ಇದೆ ಆದ್ದರಿಂದ ಪಕ್ಷದ ಕಾರ್ಯಕರ್ತರು ಸಜ್ಜುಗೊಂಡಿರುವಂತೆ ಲಾಲು ಪ್ರಸಾದ್ ಕರೆ ನೀಡಿದ್ದಾರೆ. ಯಾವುದೇ ಸಮಯದಲ್ಲಿ ಲೋಕಸಭಾ ಚುನಾವಣೆ ನಡೆದರೂ ಬಿಜೆಪಿಯನ್ನು ಎದುರಿಸಲು ಎಲ್ಲಾ ಪ್ರತಿಪಕ್ಷಗಳೂ ಒಗ್ಗೂಡಬೇಕು ಎಂದು ಲಾಲು ಪ್ರಸಾದ್ ಹೇಳಿದ್ದಾರೆ.
ಇದೇ ವೇಳೆ ಗೋರಕ್ಷಕರು ಗೋ ರಕ್ಷಣೆ ಹೆಸರಿನಲ್ಲಿ ಜನರಿಗೆ ಥಳಿಸುತ್ತಿರುವ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನೂ ಟೀಕಿಸಿರುವ ಲಾಲು ಪ್ರಸಾದ್, ಈ ಹಿಂದೆಲ್ಲಾ ಜನರು ಸಿಂಹಗಳನ್ನು ನೋಡಿದರೆ ಹೆದರುತ್ತಿದ್ದರು, ಈಗ ಹಸುಗಳನ್ನು ನೋಡಿದರೂ ಹೆದರುವ ಪರಿಸ್ಥಿತಿ ಉಂಟಾಗಿದೆ ಎಂದು ಲೇವಡಿ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.