ನವದೆಹಲಿ: ಪರಿಶಿಷ್ಟ ಜಾತಿ, ಪಂಗಡದವರನ್ನು ಫೋನ್ ನಲ್ಲಿ ಅಥವಾ ಸಾರ್ವಜನಿಕ ಪ್ರದೇಶಗಳಲ್ಲಿ ನಿಂದಿಸುವುದು ಕ್ರಿಮಿನಲ್ ಅಪರಾಧವಾಗಿದ್ದು, ಗರಿಷ್ಠ 5 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಎಸ್ ಸಿ/ ಎಸ್ ಟಿ ಮಹಿಳೆಯೊಬ್ಬರನ್ನು ಫೋನ್ ನಲ್ಲಿ ನಿಂದಿಸಿದ್ದ ವ್ಯಕ್ತಿಕ್ಯ ವಿರುದ್ಧ ಕ್ರಿಮಿನಲ್ ಆರೋಪದಡಿ, ಎಫ್ಐಆರ್ ದಾಖಲಿಸುವುದಕ್ಕೆ ತಡೆ ನೀಡಲು ನಿರಾಕರಿಸಿರುವ ಸುಪ್ರೀಂ ಕೋರ್ಟ್ ನ ನ್ಯಾ.ಚಲಮೇಶ್ವರ್ ಹಾಗೂ ಎಸ್ ಅಬ್ದುಲ್ ನಜೀರ್ ಅವರ ಪೀಠ ಫೋನ್ ನಲ್ಲಿ ಅಥವಾ ಸಾರ್ವಜನಿಕ ಪ್ರದೇಶಗಳಲ್ಲಿ ಎಸ್ ಸಿ, ಎಸ್ ಟಿ ನಿಂದನೆ ಕ್ರಿಮಿನಲ್ ಅಪರಾಧವೆಂದು ಹೇಳಿದೆ.
ಉತ್ತರ ಪ್ರದೇಶದ ಮೂಲದ ವ್ಯಕ್ತಿಯ ವಿರುದ್ಧ ಎಸ್ ಸಿ/ ಎಸ್ ಟಿ ಮಹಿಳೆಯೊಬ್ಬರನ್ನು ನಿಂದಿಸಿದ ಆರೋಪದಡಿ ಎಫ್ ಐಆರ್ ದಾಖಲಾಗಿತ್ತು, ಎಫ್ಐಆರ್ ರದ್ದು ಕೋರಿ ವ್ಯಕ್ತಿ ಅಲ್ಲಾಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಎಫ್ಐಆರ್ ರದ್ದುಗೊಳಿಸಲು ನಿರ್ದೇಶನ ನೀಡಲು ಕೋರ್ಟ್ ನಿರಾಕರಿಸಿತ್ತು. ಈಗ ಸುಪ್ರೀಂ ಕೋರ್ಟ್ ಸಹ ಅಲ್ಲಾಹಾಬಾದ್ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದಿದೆ.