ಆಧಾರ್ ಮಾಹಿತ ಸಂಪೂರ್ಣ ಸುರಕ್ಷಿತ: ಯುಐಡಿಎಐ
ಆಧಾರ್ ಮಾಹಿತಿ ಸಂಪೂರ್ಣ ಸುರಕ್ಷಿತವಾಗಿದೆ ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ(ಯುಐಡಿಎಐ) ಸೋಮವಾರ ಸ್ಪಷ್ಟಪಡಿಸಿದೆ.
ನವದೆಹಲಿ: ಆಧಾರ್ ಮಾಹಿತಿ ಸಂಪೂರ್ಣ ಸುರಕ್ಷಿತವಾಗಿದೆ ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ(ಯುಐಡಿಎಐ) ಸೋಮವಾರ ಸ್ಪಷ್ಟಪಡಿಸಿದೆ.
ಆಧಾರ್ ಸಂಖ್ಯೆ ರಹಸ್ಯ ಸಂಖ್ಯೆಯಲ್ಲಿ. ಯಾವುದೇ ಸೇವೆ ಪಡೆಯಲು ಅಥವಾ ಸರ್ಕಾರದ ಯೋಜನೆಗಳ ಲಾಭ ಪಡೆಯಲು ಅದನ್ನು ಹಂಚಿಕೊಳ್ಳಬಹುದಾಗಿದೆ. ಆಧಾರ್ ಮಾಹಿತಿ ಸಂಪೂರ್ಣ ಸುರಕ್ಷಿತವಾಗಿದ್ದು, ಇದನ್ನು ಯಾರೂ ಸೋರಿಕೆ ಮಾಡಿಲ್ಲ ಎಂದು ಯುಐಡಿಎಐ ಅಧಿಕಾರಿಗಳು ಆರ್ ಟಿಐ ಅರ್ಜಿಯೊಂದಕ್ಕೆ ಉತ್ತರಿಸಿದ್ದಾರೆ.
ಯುಐಡಿಎಐಯಿಂದ ಅಥವಾ ಅದರ ಸರ್ವರ್ ಯಾವುದೇ ಆಧಾರ್ ಮಾಹಿತಿ ಸೋರಿಕೆಯಾಗಿಲ್ಲ ಮತ್ತು ಕದ್ದಿಲ್ಲ ಎಂದು ಅಧಿಕಾರಿಗಳು 210 ಸರ್ಕಾರಿ ವೆಬ್ ಸೈಟ್ ಗಳು ಆಧಾರ್ ಮಾಹಿತಿ ಬಹಿರಂಗಪಡಿಸಿದ್ದಕ್ಕೆ ಸಂಬಂಧಿಸಿದಂತೆ ಮಾಹಿತಿ ಕೋರಿ ಸಲ್ಲಿಸಲಾಗಿದ್ದ ಆರ್ ಟಿಐ ಅರ್ಜಿಗೆ ಉತ್ತರಿಸಿದ್ದಾರೆ.
ಶಿಕ್ಷಣ ಸಂಸ್ಥೆಗಳು ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ 210 ವೆಬ್ ಸೈಟ್ ಗಳಲ್ಲಿ ಫಲಾನುಭವಿಗಳ ಹೆಸರು, ವಿಳಾಸ ಮತ್ತು ಆಧಾರ್ ಸಂಖ್ಯೆಯನ್ನು ಸಾರ್ವಜನಿಕರ ಮಾಹಿತಿಗಾಗಿ ಬಹಿರಂಗಪಡಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.