ಗಾಂಧಿನಗರ: ಗುಜರಾತ್ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಭಾರತೀಯ ಜನತಾ ಪಕ್ಷ(ಬಿಜೆಪಿ) ಸೋಮವಾರ 28 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮೂರನೇ ಪಟ್ಟಿಯಲ್ಲಿ ವಿಧಾನಸಭೆ ಸ್ಪೀಕರ್ ರಮಣ್ ವೋರಾ ಹಾಗೂ ಹಾಲಿ ಶಾಸಕ ಮತ್ತು ಮಾಜಿ ಸಚಿವ ಸೌರಭ್ ಪಟೇಲ್ ಅವರು ಸ್ಥಾನ ಪಡೆದಿದ್ದು, ವೋರಾ ಅವರು ಎಸ್ಸಿ ಮೀಸಲು ಕ್ಷೇತ್ರ ದಸದಾದಿಂದ ಸ್ಪರ್ಧಿಸಿದರೆ, ಪಟೇಲ್ ಅವರು ಬೋಟಡ್ ನಿಂದ ಸ್ಪರ್ಧಿಸುತ್ತಿದ್ದಾರೆ.
ಸದ್ಯ ಅಕೋಟಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಸೌರಭ್ ಪಟೇಲ್ ಅವರು ಈ ಹಿಂದೆ ಬೋಟಡ್ ನಿಂದಲೂ ಸ್ಪರ್ಧಿಸಿದ್ದು, ಈಗ ಎರಡನೇ ಬಾರಿ ಅದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಧ್ರಂಗಧ್ರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಹಿರಿಯ ನಾಯಕ ಹಾಗೂ ವಕ್ತಾರ ಐಕೆ ಜಡೆಜಾ ಅವರು ಮೂರನೇ ಪಟ್ಟಿಯಲ್ಲೂ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದು, ಅವರ ಬದಲಿಗೆ ಜಯರಾಮಭಾಯಿ ಧಂಜಿಭಾಯಿ ಸೋನಗ್ರಾ ಅವರಿಗೆ ಟಿಕೆಟ್ ನೀಡಲಾಗಿದೆ.
ಗುಜರಾತ್ 182 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಡಿಸೆಂಬರ್ 9 ಮೊದಲ ಹಂತದ ಮತದಾನ ಹಾಗೂ ಡಿಸೆಂಬರ್ 14ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 18ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics