ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು, ಸಂಸತ್ತಿನ ಚಳಿಗಾಲ ಅಧಿವೇಶನವನ್ನು ಕೇಂದ್ರದ ಆಡಳಿತಾರೂಢ ಸರ್ಕಾರ ನಾಶ ಮಾಡಿದೆ ಎಂದು ಸೋಮವಾರ ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿರುವ ಅವರು, ಸಂಸತ್ತಿನ ಚಳಿಗಾಲ ಅಧಿವೇಶವನ್ನು ಕೇಂದ್ರದ ಮೋದಿ ಸರ್ಕಾರ ನಾಶ ಮಾಡಿದೆ. ಪೂರ್ವ ತಯಾರಿಯಿಲ್ಲದೆಯೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್'ಟಿ)ಯನ್ನು ಜಾರಿಗೆ ತರುವ ಮೂಲಕ ದೇಶದ ತೆರಿಗೆ ವ್ಯವಸ್ಥೆ ದೋಷಪೂರಿತಕ್ಕೊಳಗಾಗುವಂತೆ ಮಾಡಿದೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ನೋಟು ನಿಷೇಧ ಕುರಿತಂತೆ ತೀವ್ರವಾಗಿ ಕಿಡಿಕಾರಿರುವ ಅವರು, ದೇಶದಲ್ಲಿ ದುಬಾರಿ ನೋಟುಗಳ ಮೇಲೆ ನಿಷೇಧ ಹೇರುವ ಮೂಲಕ ಕೋಟ್ಯಾಂತರ ಜನರು ಸಂಕಷ್ಟಕ್ಕೆ ಸಿಲುವಂತೆ ಮಾಡಿದ್ದಾರೆಂದು ತಿಳಿಸಿದ್ದಾರೆ.
ಮೋದಿ ಸರ್ಕಾರದ ಸೊಕ್ಕು ಭಾರತದ ಸಂಸದೀಯ ಪ್ರಜಾಪ್ರಭುತ್ವದ ಮೇಲೆ ಕಪ್ಪು ಛಾಯೆ ಬಿದ್ದಿದೆ. ಸಂಸತ್ತಿನ ಚಳಿಗಾಲ ಅಧಿವೇಶನವನ್ನು ಮೋದಿ ಸರ್ಕಾರ ನಾಶ ಮಾಡಿದೆ. ದೇಶಕ್ಕಾಗಿ ಮಾಜಿ ಪ್ರಧಾನಮಂತ್ರಿಗಳಾದ ಜವಾಹರ್ ಲಾಲ್ ನೆಹರು ಹಾಗೂ ಇಂದಿರಾ ಗಾಂಧಿಯವರು ನೀಡಿದ್ದ ಕೊಡುಗೆಯನ್ನು ಬದಿಗೊತ್ತುವ ಮೂಲಕ ಆಧುನಿಕ ಭಾರತದ ಇತಿಹಾಸವನ್ನು ಬದಲಿಸಲು ಪ್ರಯತ್ನಿಸುತ್ತಿದ್ದಾರೆಂದಿದ್ದಾರೆ.
ಸಾಮಾನ್ಯವಾಗಿ ಈ ಹಿಂದಿನಿಂದಲೂ ಸಂಸತ್ತಿನಲ್ಲಿ ಚಳಿಗಾಲ ನವೆಂಬರ್ ಮೂರನೇ ವಾರದಲ್ಲಿ ಆರಂಭವಾಗಿ ಡಿಸೆಂಬರ್ ಮೂರನೇ ವಾರದಲ್ಲಿ ಅಂತ್ಯಗೊಳ್ಳುತ್ತದೆ. ಮೂಲಗಳ ಪ್ರಕಾರ ಕೇಂದ್ರ ಸರ್ಕಾರ ಚಳಿಗಾಲ ಅಧಿವೇಶನದ ದಿನಗಳನ್ನು ಮೊಟಕುಗೊಳಿಸಲು ನಿರ್ಧರಿಸಿದ್ದು, ಡಿಸೆಂಬರ್ ಎರಡನೇ ವಾರದಲ್ಲಿ ಆರಂಭ ಮಾಡಿ 10 ದಿನಗಳ ಕಾಲ ಅಧಿವೇಶನ ನಡೆಸಲು ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics