ವಿದೇಶಕ್ಕೆ ತೆರಳಲು ಕಾರ್ತಿ ಚಿದಂಬರಂ ಗೆ ಸುಪ್ರೀಂ ಕೋರ್ಟ್ ಅನುಮತಿ
ಸಿಬಿಐ ತನಿಖೆ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಗೆ ವಿದೇಶಕ್ಕೆ ತೆರಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ತಮ್ಮ ಪುತ್ರಿ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಪ್ರವೇಶ ಪಡೆಯಬೇಕಿರುವ ಹಿನ್ನೆಲೆಯಲ್ಲಿ ಡಿ.2 ರಿಂದ ಡಿ.10 ರ ವರೆಗೆ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸುಪ್ರೀಂ ಕೋರ್ಟ್ ಗೆ ಕಾರ್ತಿ ಚಿದಂಬರಂ ಅರ್ಜಿ ಸಲ್ಲಿಸಿದ್ದರು. ಡಿ.10 ರೊಳಗೆ ವಾಪಸ್ ಬಾರದೇ ಇದ್ದರೆ ಅದನ್ನು ನ್ಯಾಯಾಂಗ ಉಲ್ಲಂಘನೆಯೆಂದು ಪರಿಗಣಿಸಲಾಗುತ್ತದೆ ಎಂದು ಕಾರ್ತಿ ಚಿದಂಬರಂ ಗೆ ಕೋರ್ಟ್ ಎಚ್ಚರಿಕೆ ನೀಡಿದೆ.
2007 ರಲ್ಲಿ ಪಿ ಚಿದಂಬರಂ ಅವರು ಸಚಿವರಾಗಿದ್ದಾಗ, ಐಎನ್ ಎಕ್ಸ್ ಮೀಡಿಯಾ ಲಿಮಿಟೆಡ್ ಗೆ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿಯಿಂದ ಕ್ಲಿಯರೆನ್ಸ್ ಕೊಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.