ನವದೆಹಲಿ: ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದ್ದು, ಇದೀಗ ಅದನ್ನು ಕಾನೂನಾತ್ಮಕವಾಗಿ ಸಂಪೂರ್ಣ ತೆಗೆದು ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ಮಸೂದೆ ಕುರಿತು ಪರಿಶೀಲನೆ ನಡೆಸಲು ಸಚಿವ ಸಮಿತಿ ರಚಿಸಿದ್ದು, ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ.
ತ್ರಿವಳಿ ತಲಾಖ್ ನಿಷೇಧಿಸಲು ಸರ್ಕಾರ ಮಸೂದೆ ಅಥವಾ ಈಗ ಇರುವ ಕಾನೂನಿಗೆ ತಿದ್ದುಪಡಿ ತರುಲು ಮುಂದಾಗಿದ್ದು, ಈ ಮೂಲಕ ತ್ರಿವಳಿ ತಲಾಖ್ ನೀಡುವುದು ಅಪರಾಧ ಎಂದು ಘೋಷಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ತ್ರಿವಳಿ ತಲಾಖ್ ಮಸೂದೆ ಸಿದ್ಧಪಡಿಸಿಲು ಸಚಿವರ ಸಮಿತಿ ರಚಿಸಲಾಗಿದ್ದು, ಸರ್ಕಾರ ಇದೇ ಚಳಿಗಾಲದ ಅಧಿವೇಶನದಲ್ಲೇ ಅದನ್ನು ಮಂಡಿಸಲಿದೆ ಎಂದು ಅವರು ಹೇಳಿದ್ದಾರೆ.
ಮುಸ್ಲಿಮರಲ್ಲಿ ಜಾರಿ ಇರುವ ವಿವಾಹ ವಿಚ್ಛೇದನ ಪದ್ದತಿಯಾದ ತ್ರಿವಳಿ ತಲಾಖ್ ಅನ್ನು ಆರು ತಿಂಗಳ ಕಾಲ ನಿಷೇಧಿಸಿದ್ದ ಸುಪ್ರೀಂ ಕೋರ್ಟ್, ಈ ಸಂಬಂಧ ಶಾಸನ ಜಾರಿಗೆ ತರುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು.