ಬಿಜೆಪಿ ನಾಯಕ ಸೂರತ್ ಪಾಲ್ 
ದೇಶ

ನಟಿ ದೀಪಿಕಾ ತಲೆಗೆ ರೂ.10 ಇನಾಮು ಘೋಷಿಸಿದ್ದ ಬಿಜೆಪಿ ನಾಯಕನ ವಿರುದ್ಧ ಎಫ್ಐಆರ್ ದಾಖಲು

ಪದ್ಮಾವತಿ ಚಿತ್ರ ವಿವಾದ ಕುರಿತಂತೆ ನಟಿ ದೀಪಿಕಾ ತಲೆಗೆ ರೂ.10 ಕೋಟಿ ಬಹುಮಾನ ಘೋಷಣೆ ಮಾಡಿದ್ದ ಬಿಜೆಪಿ ನಾಯಕರ ವಿರುದ್ದ ಮಂಗಳವಾರ ಎಫ್ಐಆರ್ ದಾಖಲಾಗಿದೆ...

ಗುರುಗ್ರಾಮ: ಪದ್ಮಾವತಿ ಚಿತ್ರ ವಿವಾದ ಕುರಿತಂತೆ ನಟಿ ದೀಪಿಕಾ ತಲೆಗೆ ರೂ.10 ಕೋಟಿ ಬಹುಮಾನ ಘೋಷಣೆ ಮಾಡಿದ್ದ ಬಿಜೆಪಿ ನಾಯಕರ ವಿರುದ್ದ ಮಂಗಳವಾರ ಎಫ್ಐಆರ್ ದಾಖಲಾಗಿದೆ. 
ಬಿಜೆಪಿ ನಾಯಕ ಸೂರತ್ ಪಾಲ್ ಅಮು ವಿರುದ್ಧ ಗುರುಗ್ರಾಮ ಮೂಲದ ವ್ಯಕ್ತಿಯೊಬ್ಬರು ಎಫ್ಐಆರ್ ದಾಖಲಿಸಿದ್ದಾರೆಂದು ತಿಳಿದುಬಂದಿದೆ. 
ಪದ್ಮಾವತಿ ಚಿತ್ರ ವಿವಾದ ಕುರಿತಂತೆ ಈ ಹಿಂದೆ ರಾಷ್ಟ್ರೀಯ ಮಹಿಳಾ ಆಯೋಗ ಹರಿಯಾಣ ಡಿಜಿಪಿಯವರಿಗೆ ಪತ್ರವೊಂದನ್ನು ಬರದಿತ್ತು. ಪತ್ರದಲ್ಲಿ ಬಿಜೆಪಿ ನಾಯಕ ಅಮು ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು. 
ಭಾನುವಾರವಷ್ಟೇ ಹೇಳಿಕೆ ನೀಡಿದ್ದ ಅಮು ಅವರು ಪದ್ಮಾವತಿ ಚಿತ್ರ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ, ನಟಿ ದೀಪಿಕಾ ಹಾಗೂ ರಣ್'ವೀರ್ ಸಿಂಗ್ ಅವರ ತಲೆಯನ್ನು ಕಡಿದವರಿಗೆ ರೂ.10 ಕೋಟಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT