ಸಂಗ್ರಹ ಚಿತ್ರ 
ದೇಶ

'ಪದ್ಮಾವತಿ'ಗೆ ಸಿಎಂ ಸಿದ್ದು ಬೆಂಬಲ, ಬಿಜೆಪಿ ವಿರುದ್ಧ ಆಕ್ರೋಶ

ಭಾರಿ ವಿವಾದಕ್ಕೆ ಕಾರಣವಾಗಿರುವ ಪದ್ಮಾವತಿ ಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ಪರೋಕ್ಷ ಬೆಂಬಲ ಸೂಚಿಸಿದ್ದು, ನಟಿ ದೀಪಿಕಾ ಪಡುಕೋಣೆ ಅವರ ತಲೆ ಕಡಿದರೆ ಇನಾಮು ನೀಡುವ ಬಿಜೆಪಿ ನಾಯಕರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.

ಬೆಂಗಳೂರು: ಭಾರಿ ವಿವಾದಕ್ಕೆ ಕಾರಣವಾಗಿರುವ ಪದ್ಮಾವತಿ ಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ಪರೋಕ್ಷ ಬೆಂಬಲ ಸೂಚಿಸಿದ್ದು, ನಟಿ ದೀಪಿಕಾ ಪಡುಕೋಣೆ ಅವರ ತಲೆ ಕಡಿದರೆ ಇನಾಮು ನೀಡುವ ಬಿಜೆಪಿ ನಾಯಕರ ಹೇಳಿಕೆಯನ್ನು  ಕಟುವಾಗಿ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ನಾಯಕರ ಅಸಹಿಷ್ಣುತೆ ಹಾಗೂ ದ್ವೇಷವನ್ನು ಕಟುವಾಗಿ ಖಂಡಿಸುತ್ತೇನೆ. ದೀಪಿಕಾ ಪಡುಕೋಣೆ ಕರ್ನಾಟಕದ ಮನೆ ಮಗಳಾಗಿದ್ದು, ಅವರೊಂದಿಗೆ ರಾಜ್ಯ ಸರ್ಕಾರವಿದೆ.  ನಟಿ ದೀಪಿಕಾ ಪಡುಕೋಣೆ ಮೇಲೆ ಹಲ್ಲೆ ನಡೆಸಲು ಮತ್ತು ಅವರ ತಲೆ ಕಡಿಯಲು ಇನಾಮು ನೀಡುವ ಹೇಳಿಕೆ ನೀಡಿರುವ ಬಿಜೆಪಿ ಮುಖಂಡರ ವಿರುದ್ಧ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರಿಗೆ ಆಗ್ರಹಿಸಿದ್ದಾರೆ.
ಪಂಜಾಬ್ ಸಿಎಂ ಅಮರಿಂದರ್‌, ಮಧ್ಯ ಪ್ರದೇಶ ಸಿಎಂ ಚೌಹಾಣ್‌ ರಿಂದಲೂ ಪದ್ಮಾವತಿಗೆ ವಿರೋಧ!
ಇನ್ನು ಇದೇ ವೇಳೆ ಕೇವಲ ಬಿಜೆಪಿ ನಾಯಕರು ಮಾತ್ರವಲ್ಲದೇ ಪಂಜಾಬ್ ಮತ್ತು ಮಧ್ಯ ಪ್ರದೇಶ ರಾಜ್ಯ ಸರ್ಕಾರಗಳಿಂದಲೂ ಪದ್ಮಾವತಿ ಚಿತ್ರಕ್ಕೆ ವಿರೋಧ ವ್ಯಕ್ತವಾಗಿದೆ. ಪದ್ಮಾವತಿ ಚಿತ್ರ ನಿಷೇಧಿಸಬೇಕು ಎಂಬ ಕೂಗಿಗೆ  ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಮತ್ತು ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ದನಿಗೂಡಿಸಿದ್ದಾರೆ. ಚಿತ್ರ ವಿರೋಧಿಸಿ ದೇಶದ ವಿವಿಧ ಕಡೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಇಬ್ಬರೂ ಬೆಂಬಲ  ವ್ಯಕ್ತಪಡಿಸಿದ್ದಾರೆ.
ಪಂಜಾಬ್ ಹೊರತು ಪಡಿಸಿ ಪದ್ಮಾವತಿಗೆ ಬಿಜೆಪಿಯೇತರ ಸರ್ಕಾರಗಳಿಂದ ಬೆಂಬಲ
ಏತನ್ಮಧ್ಯೆ ಪಂಜಾಬ್ ಸರ್ಕಾರವನ್ನು ಹೊರತು ಪಡಿಸಿ ಪದ್ಮಾವತಿ ಚಿತ್ರಕ್ಕೆ ಬಿಜೆಪಿಯೇತರ ಸರ್ಕಾರಗಳು ಬೆಂಬಲ ವ್ಯಕ್ತಪಡಿಸಿದ್ದು, ಕೇರಳ, ಪಶ್ಚಿಮ ಬಂಗಾಳ ಮತ್ತು ಕರ್ನಾಟಕ ಸರ್ಕಾರಗಳು ಪದ್ಮಾವತಿ ಚಿತ್ರದ ವಿರುದ್ಧ  ಪ್ರತಿಭಟನೆಯನ್ನು ಖಂಡಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!