ದೇಶ

ಹಿಂದೂ ಭಯೋತ್ಪಾದನೆ ಹೇಳಿಕೆ: ಕಮಲ್ ವಿರುದ್ಧ ಎಫ್ಐಆರ್ ಗೆ ಹೈಕೋರ್ಟ್ ಸೂಚನೆ

Lingaraj Badiger
ಚೆನ್ನೈ: ಹಿಂದೂ ಭಯೋತ್ಪಾದನೆ ಇದೆ ಎಂದು ತಮ್ಮ ಲೇಖನದಲ್ಲಿ ಉಲ್ಲೇಖಿಸಿದ್ದ ಖ್ಯಾತ ತಮಿಳು ನಟ ಕಮಲ್ ಹಾಸನ್ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದ್ದು, ಪ್ರಾಥಮಿಕ ವಿಚಾರಣೆಯ ಅಗತ್ಯವಿದ್ದರೆ ನಟನ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ಚೆನ್ನೈ ಪೊಲೀಸ್ ಆಯುಕ್ತರಿಗೆ ಸೂಚಿಸಿದೆ.
ಕಮಲ್ ಹಾಸನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿ ಎಂದು ಕೋರಿ ವಕೀಲ ಜಿ ದೇವರಾಜನ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಎಸ್ ರಮೇಶ್ ಅವರು, ಎಫ್ಐಆರ್ ದಾಖಲಿಸುವಂತೆ ಸೂಚಿಸಿದ್ದಾರೆ.
ದೇವರಾಜನ್ ಅವರು ನವೆಂಬರ್ 4ರಂದು ನಟ ಕಮಲ್ ಹಾಸನ್ ಅವರ ವಿರುದ್ಧ ಪೊಲೀಸ್ ಆಯುಕ್ತರಿಗೆ ಹಾಗೂ ನವೆಂಬರ್ 6ರಂದು ತೆಯ್ನಂಪೆಟ್ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಕಮಲ್ ಹಾಸನ್ ಅವರು ತಮ್ಮ ಲೇಖನದಲ್ಲಿ, ಈ ವರೆಗೂ ಮಾತುಕತೆಗೆ ಮುಂದಾಗುತ್ತಿದ್ದ ಬಲಪಂಥೀಯ ಸಂಘಟನೆಗಳು ಈಗ ಹಿಂಸಾಚಾರಕ್ಕೆ ಮುಂದಾಗುತ್ತಿವೆ, ಯಾರಾದರೂ ಹಿಂದೂ ಭಯೋತ್ಪಾದನೆ ಇದೆ ಎಂದರೆ ಅದನ್ನು ಬಲಪಂಥೀಯರು ನಿರಾಕರಿಸಲು ಸಾಧ್ಯವಿಲ್ಲ. ಏಕೆಂದರೆ ಅವರ ಕ್ಯಾಂಪ್ ನಲ್ಲೂ ಭಯೋತ್ಪಾದನೆ ನುಸುಳಿದೆ, ಇದರಿಂದ ಒಳ್ಳೆಯದನ್ನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು.
SCROLL FOR NEXT