ನಿರ್ಮಲಾ ಸೀತಾರಾಮನ್ 
ದೇಶ

ರಾಹುಲ್ ಗಾಂಧಿ ಬರೀ ಪ್ರಶ್ನೆಗಳನ್ನು ಮಾತ್ರ ಕೇಳುತ್ತಾನೆ, ಯಾವುದಕ್ಕೂ ಉತ್ತರಿಸಲ್ಲ: ನಿರ್ಮಲಾ ಸೀತಾರಾಮನ್

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬರೀ ಪ್ರಶ್ನೆಗಳನ್ನು ಎತ್ತುವುದರಲ್ಲಿ ಮಾತ್ರ ನಿಸ್ಸೀಮರು ಆದರೆ ಉತ್ತರಿಸುವುದರಲ್ಲಿ ಅಲ್ಲ ಎಂದು ಕೇಂದ್ರ ರಕ್ಷಣಾ...

ಅಹಮದಾಬಾದ್: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬರೀ ಪ್ರಶ್ನೆಗಳನ್ನು ಎತ್ತುವುದರಲ್ಲಿ ಮಾತ್ರ ನಿಸ್ಸೀಮರು ಆದರೆ ಉತ್ತರಿಸುವುದರಲ್ಲಿ ಅಲ್ಲ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವ್ಯಂಗ್ಯವಾಡಿದ್ದಾರೆ. 
ಜವಾಬ್ದಾರಿಯುತ ಪ್ರತಿಪಕ್ಷದ ಸ್ಥಾನ ತುಂಬುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ರಾಹುಲ್ ಗಾಂಧಿ ಬರೀ ಪ್ರಶ್ನೆಗಳನ್ನು ಮಾತ್ರ ಕೇಳುತ್ತಾರೆ. ಆದರೆ ಯಾವುದಕ್ಕೂ ಉತ್ತರಿಸುವುದಿಲ್ಲ. ಕೇಂದ್ರ ಸರ್ಕಾರದಂತೆ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸಮಾನ ಜವಾಬ್ದಾರಿ ವಿಪಕ್ಷಗಳಿಗೆ ಇರುತ್ತದೆ. ಕಾಂಗ್ರೇಸಿಗರು ಪ್ರಜಾಪ್ರಭುತ್ವದ ನಿಜವಾದ ಅರ್ಥವನ್ನು ಅರ್ಥಮಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. 
ಕಾಂಗ್ರೇಸಿಗರು ತಮ್ಮ ಭಾಷಣದಲ್ಲಿ ಬರೀ ಸ್ಕ್ರಿಪ್ಟ್ ಗಳನ್ನು ಮಾತ್ರ ಓದುತ್ತಾರೆ ಎಂದು ನಿರ್ಮಲಾ ಸೀತಾರಾಮನ್ ಅವರು ಲೇವಡಿ ಮಾಡಿದ್ದಾರೆ. 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಗುಜರಾತ್ ಮುಖ್ಯಮಂತ್ರಿ ವಿಜಯ್ ರುಪಾನಿ ಅವರು ಕೆಲ ದಿನಗಳ ಹಿಂದೆ ಗುಜರಾತ್ ಗೆ ಸಂಬಂಧಪಟ್ಟಂತೆ ಕೆಲ ಪ್ರಶ್ನೆಗಳನ್ನು ರಾಹುಲ್ ಗಾಂಧಿಗೆ ಕೇಳಿದ್ದರು. ಆದರೆ ಇಲ್ಲಿಯವರೆಗೂ ರಾಹುಲ್ ಅವುಗಳಿಗೆ ಉತ್ತರ ನೀಡಿಲ್ಲ. ಇದನ್ನು ನೋಡಿದರೇ ಅವರ ಸ್ಕ್ರಿಪ್ಟ್ ರೈಟರ್ ಬರೆದುಕೊಟ್ಟ ಸ್ಕ್ರಿಪ್ಟ್ ಗಳನ್ನು ಮಾತ್ರ ರಾಹುಲ್ ಗಾಂಧಿ ಓದುತ್ತಾರೆ. ಅವರಿಗೆ ಬೇರೆಯವರ ಪ್ರಶ್ನೆಗಳು ಕೇಳಿಸುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!