ಸಂಸತ್ 
ದೇಶ

ಡಿ.15 ರಿಂದ ಜ.5 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಡಿ.5 ರಿಂದ ಜ.05 ರ ವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಮಿತಿ ಘೋಷಿಸಿದೆ.

ನವದೆಹಲಿ: ಡಿಸೆಂಬರೇ 5 ರಿಂದ ಜನವರಿ 5 ರ ವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಮಿತಿ ಘೋಷಿಸಿದೆ. 
14 ದಿನಗಳ ಕಾಲ ಸಂಸತ್ ಅಧಿವೇಶನ ನಡೆಯಲಿದ್ದು, ಡಿ.25 ಹಾಗೂ ಡಿ.26 ಕ್ರಿಸ್ ಮಸ್ ರಜೆ ಇರಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮರ್ ಹೇಳಿದ್ದಾರೆ. ಸಂಸತ್ ಚಳಿಗಾಲದ ಅಧಿವೇಶನವನ್ನು ಉದ್ದೇಶಪೂರ್ವಕವಾಗಿ ಎನ್ ಡಿಎ ಸರ್ಕಾರ ಮುಂದೂಡುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. 
ಗುಜರಾತ್ ವಿಧಾನಸಭೆ ಚುನಾವಣೆಗೂ ಮುನ್ನ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಪ್ರತಿಪಕ್ಷಗಳ ಪ್ರಶ್ನೆಗಳನ್ನು ಎದುರಿಸಲು ಸಾಧ್ಯವಾಗದೇ ಸರ್ಕಾರ ಅಧಿವೇಶನದ ದಿನಾಂಕವನ್ನು ಮುಂದೂಡುತ್ತಿದೆ ಎಂದು ಗುಲಾಂ ನಬಿ ಆಜಾದ್ ಆರೋಪಿಸಿದ್ದರು. ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕುವುದಕ್ಕಾಗಿ ಕೇಂದ್ರ ಸರ್ಕಾರ ಅಧಿವೇಶನದ ದಿನಾಂಕವನ್ನು ಮುಂದೂಡುತ್ತಿದೆ ಎಂದು ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದವು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!