ಹಫೀಜ್ ಸಯೀದ್ 
ದೇಶ

ಪಾಕ್ ನಲ್ಲಿ ಭಯೋತ್ಪಾದಕ ಹಫೀಜ್ ಸಯೀದ್ ಬಿಡುಗಡೆ: ಉತ್ತರ ಪ್ರದೇಶದಲ್ಲಿ ಕೆಲ ಯುವಕರಿಂದ ಸಂಭ್ರಮಾಚರಣೆ!

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್ ಉಗ್ರ ಸಂಘಟನೆಯ ಮುಖಂಡ ಹಫೀಜ್ ಸಯೀದ್ ಬಿಡುಗಡೆಗೆ ವಿಶ್ವಸಮುದಾಯ ಅಸಮಾಧಾನ ವ್ಯಕ್ತಪಡಿಸುತ್ತಿದ್ದರೆ, ಉತ್ತರ ಪ್ರದೇಶದಲ್ಲಿ ಆತನ...

ಲಖೀಂಪುರ: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್ ಉಗ್ರ ಸಂಘಟನೆಯ ಮುಖಂಡ ಹಫೀಜ್ ಸಯೀದ್ ಬಿಡುಗಡೆಗೆ ವಿಶ್ವಸಮುದಾಯ ಅಸಮಾಧಾನ ವ್ಯಕ್ತಪಡಿಸುತ್ತಿದ್ದರೆ, ಉತ್ತರ ಪ್ರದೇಶದಲ್ಲಿ ಆತನ ಬಿಡುಗಡೆಯನ್ನು ಸಂಭ್ರಮದಿಂದ ಆಚರಿಸಲಾಗಿದೆ! 
ಉತ್ತರ ಪ್ರದೇಶದ ಲಖೀಂ ಪುರದ ಶಿವಪುರಿಯ ಬೇಗಂ ಬಾಗ್ ಕಾಲೋನಿಯಲ್ಲಿ ಇಸ್ಲಾಂ ನ ತೀವ್ರವಾದಿಗಳು ಪಾಕಿಸ್ತಾನದ ಧ್ವಜವನ್ನು ಅಲಂಕರಿಸಿ ಹಫೀಜ್ ಸಯೀದ್ ಜಿಂದಾಬಾದ್, ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿ ಭಯೋತ್ಪಾದಕ ಜೈಲಿನಿಂದ ಬಿಡುಗಡೆಯಾಗಿದ್ದನ್ನು ಅತ್ಯಂತ ಸಂಭ್ರಮದಿಂದ ಸ್ವಾಗತಿಸಿದ್ದಾರೆ. 
ಘಟನೆಯನ್ನು ತಕ್ಷಣವೇ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಕಾಶ್ ದೀಪ್ ಅವರ ಗಮನಕ್ಕೆ ತರಲಾಗಿದ್ದು, ಭಯೋತ್ಪಾದಕನ ಬಿಡುಗಡೆಯ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದವರನ್ನು ಬಂಧಿಸಲು ಬಂದಿದ್ದಾರೆ. ಘಟನೆ ನಡೆಯುತ್ತಿದ್ದಂತೆಯೇ ಮತ್ತೊಂದು ಗುಂಪು ಸ್ಥಳದಲ್ಲಿ ಜಮಾವಣೆಯಾಗಲು ಪ್ರಾರಂಭವಾಯಿತು. ಆದರೆ ಪ್ರದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದಕ್ಕೆ ಅಗತ್ಯವಿದ್ದ ಕ್ರಮಗಳನ್ನು ಕೈಗೊಳ್ಳುವುದಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಆಕಾಶ್ ದೀಪ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. 
ಬೇಗಂ ಬಾಗ್ ನಲ್ಲಿ ಹಫೀಜ್ ಸಯೀದ್ ನ ಬಿಡುಗಡೆಯನ್ನು 20-25 ಯುವಕರು ಸಂಭ್ರಮದಿಂದ ಆಚರಿಸುತ್ತಿದ್ದರ ಬಗ್ಗೆ ಮೊದಲು ಕೊತ್ವಾಲಿ ಪೊಲೀಸರಿಗೆ ಮಾಹಿತಿ ತಲುಪಿದೆ. ಆದರೆ ತಕ್ಷಣವೇ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣೀಸಿಲ್ಲ. ಆದರೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಈ ಬಗ್ಗೆ ಮಾಹಿತಿ ತಲುಪಿದ ನಂತರ ಪೊಲೀಸರು ಎಚ್ಚೆತ್ತುಕೊಂಡು ಸಂಭ್ರಮಾಚರಣೆ ನಡೆಯುತ್ತಿದ್ದ ಮನೆಗಳಲ್ಲಿ ಹಾಕಲಾಗಿದ್ದ ಪಾಕಿಸ್ತಾನದ ಧ್ವಜಗಳನ್ನು ತೆಗೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿರುವುದನ್ನು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು