ಮಧ್ಯಪ್ರದೇಶ: ವ್ಯಕ್ತಿಯ ಹೊಟ್ಟೆಯಿಂದ 5 ಕೆಜಿಯಷ್ಟು ಕಬ್ಬಿಣ ವಸ್ತುಗಳನ್ನು ಹೊರತೆಗೆದ ವೈದ್ಯರು!
ಮಧ್ಯಪ್ರದೇಶದಲ್ಲಿ ಅಪರೂಪದ ಶಸ್ತ್ರಚಿಕಿತ್ಸೆಯೊಂದು ನಡೆದಿದ್ದು, ರೇವಾ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನ ಹೊಟ್ಟೆಯಿಂದ 5 ಕೆ.ಜಿ ಕಬ್ಬಿಣದ ವಸ್ತುಗಳನ್ನು ಹೊರತೆಗೆದಿದ್ದಾರೆ. ಈ ಪೈಕಿ 263 ಕಾಯಿನ್ ಗಳು...
ಭೋಪಾಲ್: ಮಧ್ಯಪ್ರದೇಶದಲ್ಲಿ ಅಪರೂಪದ ಶಸ್ತ್ರಚಿಕಿತ್ಸೆಯೊಂದು ನಡೆದಿದ್ದು, ರೇವಾ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನ ಹೊಟ್ಟೆಯಿಂದ 5 ಕೆ.ಜಿ ಕಬ್ಬಿಣದ ವಸ್ತುಗಳನ್ನು ಹೊರತೆಗೆದಿದ್ದಾರೆ. ಈ ಪೈಕಿ 263 ಕಾಯಿನ್ ಗಳು ಹಾಗೂ ಶೇವಿಂಗ್ ಬ್ಲೇಡ್ ಗಳಿವೆ.
32 ವರ್ಷದ ಮೊಹಮ್ಮದ್ ಮಕ್ಸೂದ್ ಎಂಬಾತನನ್ನು ಸರ್ಕಾರಿ ಸ್ವಾಮ್ಯದ ಸಂಜಯ್ ಗಾಂಧಿ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಹೊಟ್ಟೆನೋವಿನ ಕಾರಣದಿಂದ ದಾಖಲಿಸಲಾಗಿತು. ಎಕ್ಸ್ ರೇ ಪರೀಕ್ಷೆಯ ನಂತರ ಸಮಸ್ಯೆಯನ್ನು ಕಂಡುಹಿಡಿದ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಲು ತೀರ್ಮಾನಿಸಿದರು. ಅಂತೆಯೇ 6 ವೈದ್ಯರ ತಂಡ ಶಸ್ತ್ರಚಿಕಿತ್ಸೆ ನಡೆಸಿದ್ದು, 10-12 ಶೇವಿಂಗ್ ಬ್ಲೇಡ್, 4 ದೊಡ್ಡ ಸೂಜಿಗಳು, ಒಂದು ಸರ, 263 ಕಾಯಿನ್ ಜೊತೆಗೆ ಒಂದಷ್ಟು ಗಾಜಿನ ಚೂರುಗಳು ಸೇರಿದಂತೆ 5 ಕೆಜಿ ವಸ್ತುಗಳನ್ನು ಹೊರತೆಗೆದಿದ್ದಾರೆ.
ರೋಗಿಯ ಮಾನಸಿಕ ಸ್ಥಿತಿ ಉತ್ತಮವಾಗಿಲ್ಲ ಈ ಹಿನ್ನೆಲೆಯಲ್ಲಿ ವ್ಯಕ್ತಿ ಇಂತಹ ವಸ್ತುಗಳನ್ನು ನುಂಗಿದ್ದಾರೆ. ಶಸ್ತ್ರಚಿಕಿತ್ಸೆ ನಂತರ ಚಿಕಿತ್ಸೆಗೆ ರೋಗಿ ಸೂಕ್ತವಾಗಿ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.