ನವದೆಹಲಿ: ಸಾಮಾನ್ಯ ವರ್ಗದ ಜನರಿಗೂ ಶೇ.20-25 ರಷ್ಟು ಮೀಸಲಾತಿ ನೀಡಬೇಕೆಂದು ಕೇಂದ್ರ ಸಚಿವ ರಾಮ್ ದಾಸ್ ಅಠಾವಳೆ ಹೇಳಿದ್ದಾರೆ.
ಸಾಮಾನ್ಯ ವರ್ಗದಲ್ಲಿರುವ ಬಡವರಿಗೂ ಶೇ.20-25 ರಷ್ಟು ಮೀಸಲಾತಿ ನೀಡಬೇಕು, ಇದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತರಬೇಕು ಎಂದು ಅಠಾವಳೆ ಅಭಿಪ್ರಾಯಪಟ್ಟಿದ್ದಾರೆ. ಸಾಮಾನ್ಯ ವರ್ಗದಲ್ಲಿನ ಬಡವರಿಗೆ ಮೀಸಲಾತಿ ನೀಡುವುದು ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಸಹಕಾರಿಯಾಗಲಿದೆ ಎಂದು ಅಠಾವಳೆ ಅಭಿಪ್ರಾಯಪಟ್ಟಿದ್ದಾರೆ.
ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿರುವುದಕ್ಕೆ ಮೀಸಲಾತಿಯೂ ಒಂದು ಕಾರಣ ಎನಿಸುತ್ತಿದೆ. ಶಿಕ್ಷಣ ಹಾಗೂ ಉದ್ಯೋಗಗಳಲ್ಲಿ ಸಾಮಾನ್ಯ ವರ್ಗದ ಜನರಿಗೂ ಮೀಸಲಾತಿ ಸಿಗುವಂತಾದರೆ ಜಾತಿ ವ್ಯವಸ್ಥೆಯ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು ಎಂದಿದ್ದಾರೆ.