ಶ್ರೀನಗರ: ಕಾಂಗ್ರೆಸ್ ನಾಯಕನ ಮನೆಯ ಮೇಲೆ ಉಗ್ರರು ದಾಳಿ ನಡೆಸಿರುವ ಘಟನೆ ಜಮ್ಮು-ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ನಡೆದಿದೆ.
ನ.25 ರಂದು ರಾತ್ರಿ ಈ ಘಟನೆ ನಡೆದಿದ್ದು, ಇಮ್ತಿಯಾಜ್ ಪ್ಯಾರೆ ನಿವಾಸದ ಮೇಲೆ ದಾಳಿ ನಡೆದಿದೆ. ಘಟನೆ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ದಾಳಿ ನಡೆದಾಗ ಮನೆಯಲ್ಲೇ ಇದ್ದ ಇಮ್ತಿಯಾಜ್, ಉಗ್ರರು ತಮ್ಮ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ, ಅಷ್ಟೇ ಅಲ್ಲದೇ ಗ್ರೆನೇಡ್ ನಿಂದಲೂ ದಾಳಿ ನಡೆಸಿದ್ದಾರೆ, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿಸಿದ್ದಾರೆ.